ಮೈಸೂರು: ಮಾರಿಕಾಂಬಾ ದೇವಿ ಜಾತ್ರೆ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಯಶವಂತಪುರ–ಶಿವಮೊಗ್ಗ ಟೌನ್ ನಡುವೆ ಸಂಚರಿಸುವ ಟ್ರೈ-ವೀಕ್ಲಿ ಎಕ್ಸ್ ಪ್ರೆಸ್ ರೈಲನ್ನು (16581/16582) ತಾತ್ಕಾಲಿಕವಾಗಿ ತಾಳಗುಪ್ಪದವರೆಗೆ ವಿಸ್ತರಿಸಲು ನಿರ್ಧರಿಸಿದೆ.
ಅದರಂತೆ, ಮಾರ್ಚ್ 1ರಂದು (ಭಾನುವಾರ) ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 16581 ಶಿವಮೊಗ್ಗದ ಬದಲಾಗಿ ತಾಳಗುಪ್ಪದವರೆಗೆ ಸಂಚರಿಸಲಿದೆ. ಮರಳಿ, ರೈಲು ಸಂಖ್ಯೆ 16582 ಶಿವಮೊಗ್ಗಕ್ಕೆ ಬದಲಾಗಿ ತಾಳಗುಪ್ಪದಿಂದಲೇ ತನ್ನ ಪ್ರಯಾಣವನ್ನು ಆರಂಭಿಸಲಿದೆ. ಈ ವಿಸ್ತರಣೆಯು ಕೇವಲ ಒಂದು ಟ್ರಿಪ್ ಗೆ ಮಾತ್ರ ಅನ್ವಯಿಸಲಿದೆ.
ರೈಲು ಸಂಖ್ಯೆ 16581 ಯಶವಂತಪುರದಿಂದ ಮಧ್ಯರಾತ್ರಿ 12:15ಕ್ಕೆ ಹೊರಟು, ಅಂದು ಬೆಳಿಗ್ಗೆ 09:00 ಗಂಟೆಗೆ ತಾಳಗುಪ್ಪ ತಲುಪಲಿದೆ. ಅಂದೇ ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 16582 ತಾಳಗುಪ್ಪದಿಂದ ರಾತ್ರಿ 10:00 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 04:45ಕ್ಕೆ ಯಶವಂತಪುರ ತಲುಪಲಿದೆ.
ಶಿವಮೊಗ್ಗ ಟೌನ್ ನಿಂದ ಮುಂದಕ್ಕೆ ಈ ರೈಲು ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಳು ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.
ಜಾತ್ರಾ ಮಹೋತ್ಸವಕ್ಕೆ ತೆರಳುವ ಭಕ್ತಾದಿಗಳು ಮತ್ತು ಸಾರ್ವಜನಿಕ ಪ್ರಯಾಣಿಕರು ಈ ತಾತ್ಕಾಲಿಕ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು.
ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಅರಣ್ಯ ಸಚಿವ ಈಶ್ವರ ಖಂಡ್ರೆ








