Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೇಮಕಾತಿ ಪ್ರಕ್ರಿಯೆಯಲ್ಲಿ ವಿಶ್ವವಿದ್ಯಾಲಯವನ್ನೇ ಘಟಕವಾಗಿಸಲು ಸಂಪುಟ ಉಪಸಮಿತಿ ನಿರ್ಧಾರ : ಡಾ.ಹೆಚ್ ಸಿ ಮಹದೇವಪ್ಪ

19/02/2026 6:04 AM

ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಲು `ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ

19/02/2026 6:02 AM

ರೈತರಿಗೆ ಗುಡ್ ನ್ಯೂಸ್ : ಖಾಸಗಿ ಜಮೀನುಗಳಲ್ಲಿ `ಕಾಲುದಾರಿ, ಬಂಡಿದಾರಿ’ ಬಗ್ಗೆ ಸರ್ಕಾರದಿಂದ ಮಹತ್ವದ ಅದೇಶ !

19/02/2026 5:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎತ್ತಿನಹೊಳೆ 2ನೇ ಹಂತ 2027ಕ್ಕೆ ಮುಗಿದು 7 ಜಿಲ್ಲೆಗಳ ಲಕ್ಷಾಂತರ ಮನೆ ತಲುಪುವುದು ಶತಸಿದ್ಧ: ಸಿಎಂ ಘೋಷಣೆ
KARNATAKA

ಎತ್ತಿನಹೊಳೆ 2ನೇ ಹಂತ 2027ಕ್ಕೆ ಮುಗಿದು 7 ಜಿಲ್ಲೆಗಳ ಲಕ್ಷಾಂತರ ಮನೆ ತಲುಪುವುದು ಶತಸಿದ್ಧ: ಸಿಎಂ ಘೋಷಣೆ

By kannadanewsnow0906/09/2024 3:25 PM

ಹಾಸನ : ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಅವರು ಭರವಸೆಯಿಂದ ನುಡಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದ ಬಳಿಕ, ಹೆಬ್ಬಹಳ್ಳಿಯ 4 ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆಎಂದು ಸ್ಪಷ್ಟ ಭರವಸೆ ನೀಡಿದರು.

ಹೀಗಿದ್ದರೂ ಕೆಲವರು, ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಕೆಲವರು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಕರೆ ನೀಡಿದರು.

ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿಪೂಜೆ ಆಗಿತ್ತು. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀವಿ. ಕೆರೆಗಳನ್ನು ತುಂಬಿಸಿಯೇ ತೀರುವುದೂ ಶತಸಿದ್ಧ ಎಂದು ಗ್ಯಾರಂಟಿ ಮಾತುಗಳನ್ನಾಡಿದರು.

ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಇದೇ ಸಂದರ್ಭದಲ್ಲಿ ಸ್ಪಷ್ಟ ಸೂಚನೆ ನೀಡಿದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

ವಖ್ಫ್ ಆಸ್ತಿ ಸಂರಕ್ಷಣೆ ಎಲ್ಲರ ಕರ್ತವ್ಯ: ಸಚಿವ ಜಮೀರ್ ಅಹಮದ್ ಖಾನ್

BREAKING : ಬೆಂಗಳೂರಿನಲ್ಲಿ ಇನ್ ಸ್ಟಾಗ್ರಾಮ್ ಸ್ಟಾರ್ `ಯೂನಿಸ್ ಝರೂರಾ’ ಪೊಲೀಸ್ ವಶಕ್ಕೆ | Younis Zaroora

Share. Facebook Twitter LinkedIn WhatsApp Email

Related Posts

ನೇಮಕಾತಿ ಪ್ರಕ್ರಿಯೆಯಲ್ಲಿ ವಿಶ್ವವಿದ್ಯಾಲಯವನ್ನೇ ಘಟಕವಾಗಿಸಲು ಸಂಪುಟ ಉಪಸಮಿತಿ ನಿರ್ಧಾರ : ಡಾ.ಹೆಚ್ ಸಿ ಮಹದೇವಪ್ಪ

19/02/2026 6:04 AM2 Mins Read

ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಲು `ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ

19/02/2026 6:02 AM3 Mins Read

ರೈತರಿಗೆ ಗುಡ್ ನ್ಯೂಸ್ : ಖಾಸಗಿ ಜಮೀನುಗಳಲ್ಲಿ `ಕಾಲುದಾರಿ, ಬಂಡಿದಾರಿ’ ಬಗ್ಗೆ ಸರ್ಕಾರದಿಂದ ಮಹತ್ವದ ಅದೇಶ !

19/02/2026 5:57 AM2 Mins Read
Recent News

ನೇಮಕಾತಿ ಪ್ರಕ್ರಿಯೆಯಲ್ಲಿ ವಿಶ್ವವಿದ್ಯಾಲಯವನ್ನೇ ಘಟಕವಾಗಿಸಲು ಸಂಪುಟ ಉಪಸಮಿತಿ ನಿರ್ಧಾರ : ಡಾ.ಹೆಚ್ ಸಿ ಮಹದೇವಪ್ಪ

19/02/2026 6:04 AM

ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಲು `ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ

19/02/2026 6:02 AM

ರೈತರಿಗೆ ಗುಡ್ ನ್ಯೂಸ್ : ಖಾಸಗಿ ಜಮೀನುಗಳಲ್ಲಿ `ಕಾಲುದಾರಿ, ಬಂಡಿದಾರಿ’ ಬಗ್ಗೆ ಸರ್ಕಾರದಿಂದ ಮಹತ್ವದ ಅದೇಶ !

19/02/2026 5:57 AM

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: 2026ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗೆ ಅರ್ಜಿ ಆಹ್ವಾನ

19/02/2026 5:51 AM
State News
KARNATAKA

ನೇಮಕಾತಿ ಪ್ರಕ್ರಿಯೆಯಲ್ಲಿ ವಿಶ್ವವಿದ್ಯಾಲಯವನ್ನೇ ಘಟಕವಾಗಿಸಲು ಸಂಪುಟ ಉಪಸಮಿತಿ ನಿರ್ಧಾರ : ಡಾ.ಹೆಚ್ ಸಿ ಮಹದೇವಪ್ಪ

By kannadanewsnow5719/02/2026 6:04 AM KARNATAKA 2 Mins Read

ಬೆಂಗಳೂರು : ಸಾಮಾಜಿಕ ನ್ಯಾಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹತ್ತಾರು ಭಿನ್ನ ಅಭಿಪ್ರಾಯಗಳು ಬಲವಾಗಿ ಅಸ್ತಿತ್ವದಲ್ಲಿ ಇರುವ ಸಂದರ್ಭದಲ್ಲೇ ನಮ್ಮ ಸರ್ಕಾರವು…

ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಲು `ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ

19/02/2026 6:02 AM

ರೈತರಿಗೆ ಗುಡ್ ನ್ಯೂಸ್ : ಖಾಸಗಿ ಜಮೀನುಗಳಲ್ಲಿ `ಕಾಲುದಾರಿ, ಬಂಡಿದಾರಿ’ ಬಗ್ಗೆ ಸರ್ಕಾರದಿಂದ ಮಹತ್ವದ ಅದೇಶ !

19/02/2026 5:57 AM

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: 2026ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗೆ ಅರ್ಜಿ ಆಹ್ವಾನ

19/02/2026 5:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.