Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫ್ರಿಡ್ಜ್’ನಲ್ಲಿ ತುಂಡು ‘ನಿಂಬೆಹಣ್ಣು’ ಇಟ್ಟರೆ ಏನಾಗುತ್ತೆ ಗೊತ್ತಾ? ಪ್ರಯೋಜನ ತಿಳಿದ್ರೆ, ನೀವೇ ಶಾಕ್ ಆಗ್ತೀರಿ!

23/08/2025 10:00 PM

Alert : ವಾಟ್ಸಾಪ್’ನಲ್ಲಿ ಬಂದ ‘ಆಮಂತ್ರಣ ಪತ್ರಿಕೆ’ ತೆರೆದು ನೋಡುವ ಮುನ್ನ ಎಚ್ಚರ ; 1,90,000 ರೂ. ಕಳೆದುಕೊಂಡ ಸರ್ಕಾರಿ ಉದ್ಯೋಗಿ

23/08/2025 9:48 PM

‘BCCI’ ಮಹತ್ವದ ನಿರ್ಧಾರ ; ದೇಶೀಯ ಕ್ರಿಕೆಟ್ ಸ್ವರೂಪ ಬದಲಾವಣೆ, ಈಗ ಪಂದ್ಯಗಳು ಹೀಗಿರುತ್ತವೆ.!

23/08/2025 9:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0906/09/2024 7:45 PM

ಸಕಲೇಶಪುರ : ಎತ್ತಿನಹೊಳೆ ಬಯಲು ಸೀಮೆಯ ಜನರ ಬದುಕಿನ ಜೇನಿನ ಹೊಳೆ, ಬಯಲು ಸೀಮೆ ಬರ ನೀಗಿಸುವ ಜೀವದ ಹೊಳೆ. ಗೌರಿ ಹಬ್ಬದಂದು ಗಂಗೆಗೆ ಬಾಗಿನ ಅರ್ಪಿಸಿ, 10 ವರ್ಷಗಳ ಭಗೀರಥ ಪ್ರಯತ್ನ ನಡೆಸಿ, ಎತ್ತಿನಹೊಳೆ ಏತ ನೀರಾವರಿ ಯೋಜನೆಯನ್ನು ನಮ್ಮ ಕಾಂಗ್ರೆಸ್ ಸರ್ಕಾರ ಸಾಕಾರಗೊಳಿಸಿದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ಹೆಬ್ಬನಹಳ್ಳಿಯ ವಿತರಣಾ ತೊಟ್ಟಿ- 4 ರ ಬಳಿ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಸಂಪುಟ ಸಹೋದ್ಯೋಗಿಗಳು, ಶಾಸಕ ಮಿತ್ರರ ಜೊತೆ ಬಾಗಿನ ಅರ್ಪಿಸಿ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು “ಕರ್ನಾಟಕದ ನೀರಾವರಿ ಇತಿಹಾಸದಲ್ಲೇ ಇದೊಂದು ಮಹತ್ವದ ದಿನ. ನೂರಾರು ಟೀಕೆಗಳನ್ನು ಎದುರಿಸಿದ್ದಕ್ಕೆ ಸಕಲೇಶ್ವರನ ಪುಣ್ಯ ಕ್ಷೇತ್ರದಿಂದ ವಾಣಿವಿಲಾಸದ ತಾಯಿ ಕಣಿವೆ ಮಾರಮ್ಮನ ಸನ್ನಿಧಿಗೆ ನೀರು ಹರಿಯುತ್ತಿದೆ. ನನ್ನ ಬದುಕಿನಲ್ಲೇ ಎಂದೆಂದಿಗೂ ಮರೆಯಲಾಗದ ಚರಿತ್ರೆಯ ದಿನ. ಗಂಗಾ ಮಾತೆ ಗೌರಿ ಹಬ್ಬದಂದು ಘಟ್ಟ ಹತ್ತಿ ಇಳಿಯುತ್ತಿದ್ದಾಳೆ” ಎಂದು ಹೇಳಿದರು.

“ಈ ಹಿಂದೆ ಮುಖ್ಯಮಂತ್ರಿಗಳು ಇಂಧನ ಇಲಾಖೆ ಜವಾಬ್ದಾರಿ ನೀಡಿದ್ದರು. ಈಗ ನೀರಾವರಿ ಇಲಾಖೆ ಜವಾಬ್ದಾರಿ ತೆಗೆದುಕೊಂಡ ಮೇಲೆ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಮುಗಿಸಿದ್ದೇವೆ. 2027 ಕ್ಕೆ ಎಲ್ಲಾ ಕಾಮಗಾರಿ ಮುಗಿಸಿ ಇತಿಹಾಸ ನಿರ್ಮಿಸುತ್ತೇವೆ. ಇದು ನಮ್ಮ ತಪಸ್ಸು, ಸಂಕಲ್ಪ, ಪ್ರತಿಜ್ಞೆ” ಎಂದು ಹೇಳಿದರು.

ಸಿದ್ದೇಶ್ವರ ಸ್ವಾಮಿಗಳ ವಚನ ಹೇಳಿ ಯೋಜನೆ ವಿರೋಧಿಗಳಿಗೆ ತಿರುಗೇಟು ಕೊಟ್ಟ ಡಿಸಿಎಂ

“ಕುದಿಯುವವರು ಕುದಿಯಲಿ, ಉರಿಯುವವರು ಉರಿಯಲಿ. ನಮ್ಮ ಪಾಡಿಗೆ ನಾವು ಕೆಲಸ ಮಾಡಬೇಕು. ಆಗ ಕುದಿಯುವವರು ಆವಿಯಾಗುತ್ತಾರೆ. ಉರಿಯುವವರು ಬೂದಿಯಾಗುತ್ತಾರೆ” ಎಂದು ಹೇಳಿದರು.

“ಈ ಯೋಜನೆ ಪೂರ್ಣಗೊಂಡರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಯಾರೋ ಹೇಳಿದ್ದರು. ಗಂಗಾ ಮಾತೆ ಗುಡ್ಡ, ಬೆಟ್ಟಗಳನ್ನು ಇಳಿದು ಬಯಲು ಸೀಮೆಯ ಕಡೆಗೆ ಹರಿಯುತ್ತಿದ್ದಾಳೆ. ಈ ಶುಭ ಯೋಜನೆ ಲೋಕಾರ್ಪಣೆ ಆಗುವ ದಿನವಾದ ಕಾರಣಕ್ಕೆ ಯಾರ ಬಗ್ಗೆಯೂ ಟೀಕೆ ಮಾಡಲು ಹೋಗುವುದಿಲ್ಲ. ಬಸವಣ್ಣ ನವರ ನುಡಿದರೆ ಮುತ್ತಿನ ಹಾರದಂತೆ ಇರಬೇಕು ಎನ್ನುವ ಮಾತಿನ ಮೇಲೆ ನಂಬಿಕೆನ್ನು ಇಟ್ಟವರು ನಾವು. ಅವರ ಟೀಕೆಗಳಿಗೆ ವಿಧಾನಸಭೆಯಲ್ಲಿ ಉತ್ತರ ಕೊಡುತ್ತೇನೆ” ಎಂದು ಹೇಳಿದರು.

“ಗುರಿ ಸಾಧಿಸುವ ಛಲ ಇದ್ದರೆ ಏನನ್ನೂ ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಎತ್ತಿನಹೊಳೆ ಯೋಜನೆ ಬಹುದೊಡ್ಡ ಸಾಕ್ಷಿಯಾಗಿ ನಮ್ಮ ಕಣ್ಣ ಮುಂದಿದೆ. ನಾವು ನುಡಿದಂತೆ ನಡೆದಿದ್ದೇವೆ, ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಸಾಕ್ಷಿಗುಡ್ಡೆಗಳನ್ನು ನಿರ್ಮಾಣ ಮಾಡಿದ್ದೇವೆ” ಎಂದರು.

“ಈ ಯೋಜನೆ ಪ್ರಾರಂಭ ಮಾಡಿದ ದಿನದಿಂದ ಇವತ್ತಿನವರೆಗೂ ಬಂದ ಟೀಕೆಗಳು ಒಂದೆರಡಲ್ಲ. ಸುತ್ತಮುತ್ತಲಿನ ಬೆಟ್ಟ, ಗುಡ್ಡಗಳನ್ನು ಮೀರಿಸುವಷ್ಟು ಟೀಕೆಗಳು ಬಂದವು. ಸಮ್ಮಿಶ್ರ ಸರ್ಕಾರ ಇದ್ದಾಗ ಯೋಜನೆಯನ್ನು ವೀಕ್ಷಣೆ ಮಾಡಲು ಬಂದಿದ್ದೆ. ಆಗ ಏನೂ ಕೆಲಸ ಆಗದೆ ಪಾಳು ಬಿದ್ದಿತ್ತು. ಈಗ ಜೀವಕಳೆ ಬಂದಿದೆ” ಎಂದರು.

75 ಲಕ್ಷ ಜನರ ಬಾಯಾರಿಕೆ ನೀಗಿಸುವ ಯೋಜನೆ

“7 ಜಿಲ್ಲೆಗಳ 6,657 ಗ್ರಾಮಗಳ 75 ಲಕ್ಷ ಜನರ ಬಾಯಾರಿಕೆ ನೀಗಿಸುವ ಈ ಯೋಜನೆಯ ವಿರುದ್ಧ ಅನೇಕ ಜನರು ಎನ್ ಜಿಟಿಗೆ ಅರ್ಜಿ ಹಾಕಿದ್ದರು. ಎಲ್ಲಾ ತಕರಾರುಗಳನ್ನು ವಜಾ ಮಾಡಿ ನಮ್ಮ ಪರವಾಗಿ ಎನ್ ಜಿಟಿ ತೀರ್ಪು ನೀಡಿತು. ಇದರಿಂದ 527 ಕೆರೆಗಳಿಗೆ ನೀರನ್ನು ತುಂಬಿಸಲಾಗುತ್ತದೆ. ಏನಾದರೂ ಕೆಲಸ ಮಾಡುವ ಮುನ್ನ ವಜ್ರ ಯಾವುದು, ಕೆಸರು ಯಾವುದು ಎಂದು ತಿಳಿಯಬೇಕು. ವಜ್ರದಿಂದ ವಜ್ರವನ್ನು ಕತ್ತರಿಸಬಹುದು. ಆದರೆ ಕೆಸರಿನಿಂದ, ಕೆಸರನ್ನು ಸ್ವಚ್ಚ ಮಾಡಲು ಆಗುವುದಿಲ್ಲ. ವಜ್ರ ಯಾವುದು ಕೆಸರು ಯಾವುದು ಎಂಬುದನ್ನು ನೀವೇ ನಿರ್ಧಾರ ಮಾಡಿ” ಎಂದರು.

ಬಯಲು ಸೀಮೆಯ ಬದುಕಿನ ನೀರು

“ಎತ್ತಿಗೆ ಸಾಕಾಗುವಷ್ಟು ನೀರು ಮಾತ್ರ ಇಲ್ಲಿದೆ. ಈ ನೀರನ್ನು ಬೆಂಗಳೂರು ಸುತ್ತಮುತ್ತಾ ತೆಗೆದುಕೊಂಡು ಹೋಗಲು ಹೇಗೆ ಸಾಧ್ಯ ಎಂದು ಪತ್ರಕರ್ತರೊಬ್ಬರು ಹಾಸನ ಜಿಲ್ಲಾಧಿಕಾರಿಗಳ ಬಳಿ ಕೇಳಿದ್ದರಂತೆ. ಇದು ಎತ್ತಿಗಾಗಿ ನೀರಲ್ಲಿ, ಬಯಲು ಸೀಮೆಯ ಜನರ ಬದುಕಿಗಾಗಿ ಎತ್ತುತ್ತಿರುವ ನೀರು” ಎಂದರು.

ಕಾಂಗ್ರೆಸ್ ಸರ್ಕಾರದ ಸಾಕ್ಷಿಗುಡ್ಡೆ

“ಮನುಷ್ಯ ಹುಟ್ಟಿದ ಮೇಲೆ ಸಾಕ್ಷಿ ಗುಡ್ಡೆಗಳನ್ನು ಬಿಟ್ಟು ಹೋಗಬೇಕು. ಕರ್ನಾಟಕದಲ್ಲಿ ಆಲಮಟ್ಟಿ ಜಲಾಶಯಕ್ಕೆ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಶಂಕುಸ್ಥಾಪನೆ ಮಾಡಿದರು. ಅದನ್ನು ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ಉದ್ಘಾಟನೆ ಮಾಡಿದರು. 2014 ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಮಗಾರಿ ಪ್ರಾರಂಭವಾಗಿ ಅವರಿಂದಲೇ ಉದ್ಘಾಟನೆಯಾಗುತ್ತಿದೆ. ಇದು ಕಾಂಗ್ರೆಸ್ ಸರ್ಕಾರದ ಸಾಕ್ಷಿ ಗುಡ್ಡೆ” ಎಂದರು

“23 ಸಾವಿರ ಕೋಟಿ ಹಣ ಖರ್ಚಾಗಲಿದೆ. ಆದರೆ ನಮಗೆ ಹಣಕ್ಕಿಂತ ಜನರ ಬದುಕು ಮುಖ್ಯ. ರೈತರು ಈ ರಾಜ್ಯ ಮತ್ತು ದೇಶಕ್ಕಾಗಿ ಭೂಮಿ ಕಳೆದುಕೊಂಡಿದ್ದಾರೆ. ವೀರಪ್ಪ ಮೊಯಿಲಿ ಅವರ ಅನೇಕ ದಿನಗಳ ಆಸೆ ಈಡೇರುತ್ತಿದೆ” ಎಂದರು.

“ಈ ಯೋಜನೆ ನನ್ನಿಂದ ಮಾತ್ರ ಸಾಧ್ಯವಾಗಿಲ್ಲ. ಇದರ ಜಾರಿಗೆ ಸಹಕರಿಸಿದ ಮಾನ್ಯ ಸಿಎಂ ಸಿದ್ದರಾಮಯ್ಯನವರು, ನನ್ನ ಸಂಪುಟದ ಸಹೋದ್ಯೋಗಿಗಳು, ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು, ಟಿ.ಬಿ.ಜಯಚಂದ್ರ ಅವರು, ಕೋಲಾರದ ಭಾಗದ ಶಾಸಕರು, ಸಂಸದರು, ಶಾಸಕರು, ಯೋಜನೆಗೆ ಜಮೀನು ಕೊಟ್ಟ ರೈತರು, ಕೆಲಸ ಮಾಡಿದ ಅಧಿಕಾರಿಗಳು, ಇಂಜಿನಿಯಯರ್ ಗಳಿಂದ ಹಿಡಿದು ಕಟ್ಟಕಡೆಯ ಕಾರ್ಮಿಕರವರೆಗೆ ಪ್ರತಿಯೊಬ್ಬರನ್ನು ವಿನಮ್ರವಾಗಿ ಅಭಿನಂದಿಸುತ್ತೇನೆ” ಎಂದು ಹೇಳಿದರು.

ಇದೇ ವೇಳೆ ರಾಜ್ಯದ ಜನರಿಗೆ ಗೌರಿ ಮತ್ತು ಗಣೇಶ ಹಬ್ಬದ ಶುಭಾಶಯಗಳನ್ನು ಡಿಸಿಎಂ ಅವರು ತಿಳಿಸಿದರು.

ವಾಸ್ತು ಹಾಗೂ ಶುದ್ಧೀಕರಣ ಪೂಜೆಯಲ್ಲಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದ ಡಿಸಿಎಂ

ಗೌರಿ ಹಬ್ಬದ ದಿನ ಶುಭ ಮುಹೂರ್ತ, ಶುಭ ಘಳಿಗೆ, ಶುಭ ದಿನದಂದು ಎತ್ತಿನಹೊಳೆ ಯೋಜನೆಯ ಚಾಲನೆ ಯಾವುದೇ ವಿಘ್ನಗಳಿಲ್ಲದೆ ನೆರವೇರಲಿ ಎಂದು ಹಿಂದಿನ ದಿನ (ಗುರುವಾರದಂದು) ಸಂಕಲ್ಪ ಪೂಜೆಯಲ್ಲಿ ಪಾಲ್ಗೊಂಡಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಬೆಳಿಗ್ಗೆ 6 ಗಂಟೆಯ ವೇಳೆಗಾಗಲೇ ಸಕಲೇಶಪುರ ದೊಡ್ಡನಗರದ ಎತ್ತಿನಹೊಳೆ ಡಿಸಿ 3- ಪಂಪ್ ಹೌಸ್ ನಲ್ಲಿ ಮೈಸೂರಿನ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶಶಿಶೇಖರ್ ದೀಕ್ಷಿತ್ ಅವರ ನೇತೃತ್ವದಲ್ಲಿ ನಡೆದ ವಾಸ್ತು ಪೂಜೆ ಹಾಗೂ ಶುದ್ಧೀಕರಣ ಪೂಜೆಯಲ್ಲಿ ಪಾಲ್ಗೊಂಡರು.

ದೊಡ್ಡನಗರದ ಡಿ.ಸಿ 3 ಪಂಪ್ ಹೌಸ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಸಚಿವರಾದ ಪರಮೇಶ್ವರ್, ಎಂ.ಬಿ. ಪಾಟೀಲ್ ಅವರು ಡಿಸಿ-3 ಪಂಪ್ ಹೌಸ್ ನಲ್ಲಿ ನೀರೆತ್ತುವ ಯಂತ್ರಗಳಿಗೆ ಚಾಲನೆ ನೀಡಿದರು. ಇಲ್ಲಿಂದ 1500 ಕ್ಯೂಸೆಕ್ ನೀರನ್ನು ಮೇಲಕ್ಕೆ ಎತ್ತಿ ಹೆಬ್ಬನಹಳ್ಳಿಯಲ್ಲಿರುವ ಡಿಸಿ – 4ಕ್ಕೆ ಹರಿಸಲಾಯಿತು. ಹೆಬ್ಬನಹಳ್ಳಿಯಲ್ಲಿ ಮಹತ್ವಾಕಾಂಕ್ಷಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಮೊದಲ ಹಂತವನ್ನು ಉದ್ಘಾಟಿಸಲಾಯಿತು.

ಫಲಾನುಭವಿ ಜಿಲ್ಲೆಗಳ ಉಸ್ತುವಾರಿ ಸಚಿವರುಗಳಿಂದ ಚಾಲನೆ

ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ, ಹೊಂಗದಹಳ್ಳಗಳಲ್ಲಿ ಇರುವ ಏಳು ವಿಯರ್ ಗಳನ್ನು ಫಲಾನುಭವಿ ಜಿಲ್ಲೆಗಳ ಉಸ್ತುವಾರಿ ಸಚಿವರು ಚಾಲನೆ ನೀಡಿದರು.

ಶುಕ್ರವಾರ (ಸೆ. 6 ರಿಂದ) 60 ದಿನಗಳ ಕಾಲ ನಿರಂತರವಾಗಿ ಸುಮಾರು 5 ಟಿಎಂಸಿ ನೀರನ್ನು ಎತ್ತಿ ವೇದಾ ವ್ಯಾಲಿ ಮೂಲಕ ವಾಣಿ ವಿಲಾಸ ಅಣೆಕಟ್ಟಿಗೆ ಹರಿಸಲಾಗುವುದು.

ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಗಳ ಸಾಲ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Good News : ವಾಹನ ಸವಾರರಿಗೆ ಸಿಹಿ ಸುದ್ದಿ ; ‘ಕೇಂದ್ರ ಸರ್ಕಾರ’ದಿಂದ ಶೀಘ್ರ ‘ಪೆಟ್ರೋಲ್, ಡಿಸೇಲ್ ಬೆಲೆ’ ಇಳಿಕೆ ; ವರದಿ

Good News : ಕ್ಷಯ ರೋಗಿಗಳಿಗೆ ಸಿಹಿ ಸುದ್ದಿ ; ಹೊಸ ‘ಚಿಕಿತ್ಸೆ’ಗೆ ಕೇಂದ್ರ ಸರ್ಕಾರ ಅನುಮೋದನೆ, 6 ತಿಂಗಳಲ್ಲಿ ‘TB’ ನಿವಾರಣೆ

Share. Facebook Twitter LinkedIn WhatsApp Email

Related Posts

BREAKING : ತುಮಕೂರಿನಲ್ಲಿ ಆಸ್ಪತ್ರೆಯಲ್ಲೇ `ಹೃದಯಾಘಾತ’ದಿಂದ ಕರ್ತವ್ಯನಿರತ ನರ್ಸ್ ಸಾವು.!

23/08/2025 8:48 PM1 Min Read

BREAKING: ಶಾಸಕ ಯತ್ನಾಳ್ ವಿರುದ್ಧ ವಿಡಿಯೋ ಹರಿಬಿಟ್ಟ ಅನ್ಯಕೋಮಿನ ಯುವಕ : ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನ

23/08/2025 8:27 PM1 Min Read

`ಆಯುಷ್ಮಾನ್ ಕಾರ್ಡ್’ : ಯಾವ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು? ಇಲ್ಲಿದೆ ಮಾಹಿತಿ

23/08/2025 8:13 PM2 Mins Read
Recent News

ಫ್ರಿಡ್ಜ್’ನಲ್ಲಿ ತುಂಡು ‘ನಿಂಬೆಹಣ್ಣು’ ಇಟ್ಟರೆ ಏನಾಗುತ್ತೆ ಗೊತ್ತಾ? ಪ್ರಯೋಜನ ತಿಳಿದ್ರೆ, ನೀವೇ ಶಾಕ್ ಆಗ್ತೀರಿ!

23/08/2025 10:00 PM

Alert : ವಾಟ್ಸಾಪ್’ನಲ್ಲಿ ಬಂದ ‘ಆಮಂತ್ರಣ ಪತ್ರಿಕೆ’ ತೆರೆದು ನೋಡುವ ಮುನ್ನ ಎಚ್ಚರ ; 1,90,000 ರೂ. ಕಳೆದುಕೊಂಡ ಸರ್ಕಾರಿ ಉದ್ಯೋಗಿ

23/08/2025 9:48 PM

‘BCCI’ ಮಹತ್ವದ ನಿರ್ಧಾರ ; ದೇಶೀಯ ಕ್ರಿಕೆಟ್ ಸ್ವರೂಪ ಬದಲಾವಣೆ, ಈಗ ಪಂದ್ಯಗಳು ಹೀಗಿರುತ್ತವೆ.!

23/08/2025 9:12 PM

BREAKING : ತುಮಕೂರಿನಲ್ಲಿ ಆಸ್ಪತ್ರೆಯಲ್ಲೇ `ಹೃದಯಾಘಾತ’ದಿಂದ ಕರ್ತವ್ಯನಿರತ ನರ್ಸ್ ಸಾವು.!

23/08/2025 8:48 PM
State News
KARNATAKA

BREAKING : ತುಮಕೂರಿನಲ್ಲಿ ಆಸ್ಪತ್ರೆಯಲ್ಲೇ `ಹೃದಯಾಘಾತ’ದಿಂದ ಕರ್ತವ್ಯನಿರತ ನರ್ಸ್ ಸಾವು.!

By kannadanewsnow5723/08/2025 8:48 PM KARNATAKA 1 Min Read

ತುಮಕೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತುಮಕೂರಿನಲ್ಲಿ ಹೃದಯಾಘಾತದಿಂದ ಕರ್ತವ್ಯನಿರತ ನರ್ಸ್ ಬಲಿಯಾಗಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಕುಸಿದುಬಿದ್ದು ನರ್ಸ್…

BREAKING: ಶಾಸಕ ಯತ್ನಾಳ್ ವಿರುದ್ಧ ವಿಡಿಯೋ ಹರಿಬಿಟ್ಟ ಅನ್ಯಕೋಮಿನ ಯುವಕ : ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನ

23/08/2025 8:27 PM

`ಆಯುಷ್ಮಾನ್ ಕಾರ್ಡ್’ : ಯಾವ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು? ಇಲ್ಲಿದೆ ಮಾಹಿತಿ

23/08/2025 8:13 PM

ರಾಜ್ಯದಲ್ಲಿ ಇನ್ಮುಂದೆ `ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ’ ಕಡ್ಡಾಯ

23/08/2025 8:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.