Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 20 ವರ್ಷಗಳ ನಂತರ ಒಂದಾದ `ಠಾಕ್ರೆ’ ಸಹೋದರರು : ಒಂದೇ ವೇದಿಕೆಯಲ್ಲಿ ಉದ್ಧವ್ – ರಾಜ್ ಠಾಕ್ರೆ ಅಪ್ಪುಗೆ.!

05/07/2025 12:27 PM

BREAKING: HUL ಮಾಜಿ ಅಧ್ಯಕ್ಷ ಸುಸಿಮ್ ದತ್ತಾ ನಿಧನ |Susim Dutta passes away

05/07/2025 12:24 PM

ಹೆಣ್ಣು ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ `ಸುಕನ್ಯಾ ಸಮೃದ್ಧಿ ಖಾತೆ’ ತೆರೆಯಬಹುದು.!

05/07/2025 12:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2027ಕ್ಕೆ ‘ಎತ್ತಿನಹೊಳೆ ಯೋಜನೆ’ ಪೂರ್ಣ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ
KARNATAKA

2027ಕ್ಕೆ ‘ಎತ್ತಿನಹೊಳೆ ಯೋಜನೆ’ ಪೂರ್ಣ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

By kannadanewsnow0924/08/2024 6:11 PM

ಬೆಂಗಳೂರು: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ನಿರ್ಣಾಯಕ ಘಟ್ಟ ತಲುಪಿದ್ದು, 2027ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ (139 ದಿನಗಳು) 24.01 ಟಿ.ಎಂ.ಸಿ ಪ್ರಮಾಣದ ಪ್ರವಾಹದ ನೀರನ್ನು 07 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲ್ಲೂಕಿನ 38 ಪಟ್ಟಣ ಪ್ರದೇಶದ ಹಾಗೂ 6657 ಗ್ರಾಮಗಳ ಸುಮಾರು 75.59 ಲಕ್ಷ (Projected population for 2023-24) ಜನರಿಗೆ ಮತ್ತು ಜಾನುವಾರುಗಳಿಗೆ 14.056 ಟಿ.ಎಂ.ಸಿ ಕುಡಿಯುವ ನೀರನ್ನು ಒದಗಿಸುವುದು. ಜೊತೆಗೆ 05 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ತುಮಕೂರು ವ್ಯಾಪ್ತಿಯಲ್ಲಿ ಬರುವ 527 ಕೆರೆಗಳಿಗೆ 9.953 ಟಿ.ಎಂ.ಸಿ ಪ್ರಮಾಣದ ನೀರನ್ನು ಕೆರೆಗಳ ಸಾಮರ್ಥ್ಯದ ಶೇ. 50% ರಷ್ಟು ತುಂಬಿಸಿ ಅಂತರ್ಜಲ ಮರುಪೂರಣ ಮಾಡುವ ರೂ.23,251.66 ಕೋಟಿಗಳ ಮೊತ್ತದ ಉದ್ದೇಶಿತ ರಾಜ್ಯದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆಯಾದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯು ನಿರ್ಣಾಯಕ ಘಟ್ಟ ತಲುಪಿದೆ ಎಂದಿದ್ದಾರೆ.

2014ರಲ್ಲಿ ಆರಂಭಗೊಂಡ ಯೋಜನೆಯ ಮೊದಲನೇ ಹಂತದ ಏತ ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಬಹುದಿನಗಳಿಂದ ಉದ್ಭವಿಸಿದ್ದ ಅಡಚಣೆಗಳನ್ನು ನಿವಾರಿಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, ಪ್ರಸ್ತುತ ವಿಯರ್-1,4&5 ರಿಂದ ನೀರನ್ನೆತ್ತಿ (ಒಟ್ಟಾರೆ 35.50 ಕ್ಯುಮೆಕ್ಸ್) ವಿತರಣಾ ತೊಟ್ಟ್ಟಿ-3 ರವರೆಗೆ (Delivery Chamber-3) ಪೂರೈಸಿ ತದನಂತರ ವಿತರಣಾ ತೊಟ್ಟ್ಟಿ-3 ರಿಂದ ನೀರನ್ನೆತ್ತಿ ವಿತರಣಾ ತೊಟ್ಟ್ಟಿ-4 ರ ಮುಖಾಂತರ ಗುರುತ್ವ ಕಾಲುವೆಗೆ ನೀರನ್ನು ಹರಿಸಲು ಯೋಜಿಸಲಾಗಿದೆ. ಗುರುತ್ವ ಕಾಲುವೆಯು ಒಟ್ಟು 252.61 ಕಿ.ಮೀ ಉದ್ದವಿದ್ದು, ಈ ಪೈಕಿ ಸ:42.00 ಕಿ.ಮೀ ವರಗಿನ ಕಾಮಗಾರಿಗಳು ಪೂರ್ಣಗೊಂಡಿದ್ದು, ನಂತರದ ಕಾಮಗಾರಿಗಳು ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಪೂರ್ಣಗೊಂಡಿರದ ಕಾರಣ, ಗುರುತ್ವ ಕಾಲುವೆಯ ಸ:32.50 ಕಿ.ಮೀ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ಸುಮಾರು 132.50 ಕಿ.ಮೀ ದೂರದಲ್ಲಿರುವ ವಾಣ ವಿಲಾಸ ಸಾಗರಕ್ಕೆ ವೇದಾ ವ್ಯಾಲಿಯ ಮುಖಾಂತರ ತಾತ್ಕಾಲಿಕವಾಗಿ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ.

ಇದರನ್ವಯ ನವೆಂಬರ್-2023 ರಿಂದಲೇ ಪೂರ್ವ ಪರಿಕ್ಷಾರ್ಥ ಚಾಲನಾ ಚಟುವಟಿಕೆಗಳನ್ನು ಕೈಗೊಳ್ಳಲಾಗಿದ್ದು, ವಿಯರ್-4&5 ರಿಂದ ನೀರನ್ನೆತ್ತಿ ವಿತರಣಾ ತೊಟ್ಟ್ಟಿ-3 ರವರೆಗೆ ನೀರನ್ನು ಪೂರೈಸಲಾಗಿತ್ತು. ಪ್ರಸ್ತುತ ಇವುಗಳ ಜೊತೆ ವಿಯರ್-1 ರಿಂದಲೂ ಸಹ ನೀರನ್ನೆತ್ತಿ ವಿತರಣಾ ತೊಟ್ಟ್ಟಿ-4 ರವರೆಗೆ ಪೂರೈಸಿ, ಅಲ್ಲಿಂದ ಗುರುತ್ವ ಕಾಲುವೆಗೆ ದಿನಾಂಕ:20.08.2024 ರಂದು ಯಶಸ್ವಿಯಾಗಿ ನೀರು ಹರಿಸಲಾಗಿದ್ದು, ಗುರುತ್ವ ಕಾಲುವೆಯಲ್ಲಿನ ನೀರು ಸ:32.50 ಕಿ.ಮೀ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ವೇದಾ ವ್ಯಾಲಿಯನ್ನು ಪ್ರವೇಶಿಸಿ ಈಗಾಗಲೇ ಹಳೇಬೀಡು ಮತ್ತು ಬೆಳವಾಡಿ ಕೆರೆಗಳು ತುಂಬಿ ಕೋಡಿ ಬಿದ್ದು, ವಾಣಿ ವಿಲಾಸ ಸಾಗರದತ್ತ ನೀರು ಹರಿಯುತ್ತಿದೆ.

ಪ್ರಸಕ್ತ ವಿಯರ್-3 ಅನ್ನು ಹೊರತುಪಡಿಸಿ, ಉಳಿದ ಎಲ್ಲಾ ವಿಯರ್‌ಗಳಿಂದ ಸೆಪ್ಟಂಬರ್-5ರೊಳಗೆ ಪೂರ್ವ ಪರೀಕ್ಷಾರ್ಥವಾಗಿ ನೀರನ್ನೆತ್ತಿ ಗುರುತ್ವ ಕಾಲುವೆಗೆ ಪೂರೈಸಲು ಯೋಜಿಸಲಾಗಿದೆ. ಪ್ರಸ್ತುತ ಪ್ರಗತಿಯಲ್ಲಿರುವ ಪೂರ್ವ ಪರೀಕ್ಷಾರ್ಥ ಚಟುವಟಿಗಳನ್ನು ಪೂರ್ಣಗೊಳಿಸಿ, ಶೀಘ್ರದಲ್ಲಿಯೇ ಅಧಿಕೃತವಾಗಿ ಮುಖ್ಯಮಂತ್ರಿಗಳ ಹಾಗೂ ಉಪ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಯೋಜನೆಯ ಕಾಮಗಾರಿಗಳಿಗೆ ಪ್ರಾಯೋಗಿಕ ಚಾಲನೆ ನೀಡಿ ರಾಜ್ಯಕ್ಕೆ ಸಮರ್ಪಿಸಲಾಗುವುದು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗಾಗಿ ಜುಲೈ-2024ರ ಅಂತ್ಯದವರೆಗೆ ಒಟ್ಟಾರೆ ಸಂಚಿತ ರೂ.16,152.05 ಕೋಟಿಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದ್ದು, ಯೋಜನೆಯನ್ನು 2026-27ನೇ ಸಾಲಿನಲ್ಲಿ 31.03.2027ರ ಅಂತ್ಯಕ್ಕೆ ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ.

ಎತ್ತಿನಹೊಳೆ ಯೋಜನೆಯ ಜಲಾನಯನ ಪ್ರದೇಶದಲ್ಲಿ ನಿರ್ಮಿಸಲಾಗಿರುವ 8 ವಿಯರ್‌ಗಳ ಹತ್ತಿರ ನೀರಿನ ಹರಿವನ್ನು ನಿಖರವಾಗಿ ಅಳೆಯುವ ಉದ್ದೇಶದಿಂದ (Real time discharge measurement) ಜರ್ಮನ್ ತಂತ್ರಜ್ಞಾನವನ್ನೊಳಗೊಂಡ Telemetry ವ್ಯವಸ್ಥೆಯನ್ನು 2018 ರಲ್ಲಿ ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನ ಮುಂಗಾರಿನ ಹಂಗಾಮಿನಲ್ಲಿ ಜೂನ್-1 ರಿಂದ ಆಗಸ್ಟ್-20 ರವರೆಗೆ 13.34 ಟಿ.ಎಂ.ಸಿ ನೀರು ದಾಖಲಾಗಿರುವ ಪೈಕಿ ತಿರುವುಗೊಳಿಸಬಹುದಾದಂತಹ ನೀರಿನ ಪ್ರಮಾಣವು 9.23 ಟಿ.ಎಂ.ಸಿ ಗಳಾಗಿರುತ್ತದೆ ಎಂದಿದ್ದಾರೆ.

ವಿದ್ಯಾರ್ಥಿಗಳ ಗಮನಕ್ಕೆ: ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯಲ್ಲಿ ಬಾಗಿಯಾಗಿ, 31,000 ಬಹುಮಾನ ಗೆಲ್ಲಿ | Essay Competition

ಬೆಂಗಳೂರಿಗರೇ ಗಮನಿಸಿ: ‘ಗಣೇಶ ಪ್ರತಿಷ್ಠಾಪನೆ’ಗೆ ಅನುಮತಿ ನೀಡಲು ’63 ಏಕಗವಾಕ್ಷಿ ಕೇಂದ್ರ’ ಓಪನ್

‘ಪ್ರೌಢಶಾಲಾ ವಿದ್ಯಾರ್ಥಿ’ಗಳ ಗಮನಕ್ಕೆ: ಈ ‘ರಸಪ್ರಶ್ನೆ ಸ್ಪರ್ಧೆ’ಯಲ್ಲಿ ಭಾಗಿಯಾಗಿ, ‘40,000 ಬಹುಮಾನ’ ಗೆಲ್ಲಿ | Science Quiz Competition

Share. Facebook Twitter LinkedIn WhatsApp Email

Related Posts

ಹೆಣ್ಣು ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ `ಸುಕನ್ಯಾ ಸಮೃದ್ಧಿ ಖಾತೆ’ ತೆರೆಯಬಹುದು.!

05/07/2025 12:20 PM1 Min Read

SHOCKING : ಬೆಳಗಾವಿಯಲ್ಲಿ ಘೋರ ಘಟನೆ : ಕರ್ತವ್ಯ ನಿರತ ‘ASI’ ‘ಹೃದಯಾಘಾತಕ್ಕೆ’ ಬಲಿ

05/07/2025 12:13 PM1 Min Read

BREAKING : ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ‘RSS’ ಬ್ಯಾನ್ ಫಿಕ್ಸ್ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

05/07/2025 12:09 PM1 Min Read
Recent News

BREAKING : 20 ವರ್ಷಗಳ ನಂತರ ಒಂದಾದ `ಠಾಕ್ರೆ’ ಸಹೋದರರು : ಒಂದೇ ವೇದಿಕೆಯಲ್ಲಿ ಉದ್ಧವ್ – ರಾಜ್ ಠಾಕ್ರೆ ಅಪ್ಪುಗೆ.!

05/07/2025 12:27 PM

BREAKING: HUL ಮಾಜಿ ಅಧ್ಯಕ್ಷ ಸುಸಿಮ್ ದತ್ತಾ ನಿಧನ |Susim Dutta passes away

05/07/2025 12:24 PM

ಹೆಣ್ಣು ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ `ಸುಕನ್ಯಾ ಸಮೃದ್ಧಿ ಖಾತೆ’ ತೆರೆಯಬಹುದು.!

05/07/2025 12:20 PM

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹ, ಭೂಕುಸಿತ: 69 ಮಂದಿ ಸಾವು, 37 ಮಂದಿ ನಾಪತ್ತೆ

05/07/2025 12:15 PM
State News
KARNATAKA

ಹೆಣ್ಣು ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ `ಸುಕನ್ಯಾ ಸಮೃದ್ಧಿ ಖಾತೆ’ ತೆರೆಯಬಹುದು.!

By kannadanewsnow5705/07/2025 12:20 PM KARNATAKA 1 Min Read

ಹೆಣ್ಣು ಮಕ್ಕಳ ಪೋಷಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಇನ್ಮುಂದೆ ನಿಮ್ಮ ಮಗುವಿನ ಹೆಸರಿನಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಠೇವಣಿ ಇಡಲು ನೀವು…

SHOCKING : ಬೆಳಗಾವಿಯಲ್ಲಿ ಘೋರ ಘಟನೆ : ಕರ್ತವ್ಯ ನಿರತ ‘ASI’ ‘ಹೃದಯಾಘಾತಕ್ಕೆ’ ಬಲಿ

05/07/2025 12:13 PM

BREAKING : ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ‘RSS’ ಬ್ಯಾನ್ ಫಿಕ್ಸ್ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

05/07/2025 12:09 PM

‘ಗ್ರಾಮ ಒನ್ ಕೇಂದ್ರ’ಗಳನ್ನು ಸ್ಥಾಪಿಸಲು ಆನ್‌ಲೈನ್ ಅರ್ಜಿ ಆಹ್ವಾನ.!

05/07/2025 12:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.