ಧಾರವಾಡ : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕ್ಷೆ ಅಮಾನತ್ತಿನಲ್ಲಿ ಇಟ್ಟು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಮಾಜಿ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು.
ವಿಚಾರಣೆ ವೇಳೆ ಶಿಕ್ಷೆ ಆಗಿರುವುದರಿಂದ ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹಗೊಂಡಿದ್ದಾರೆ. ಖಾಲಿ ಸ್ಥಾನಕ್ಕೆ ಆಯೋಗ ಚುನಾವಣೆ ಘೋಷಿಸುವ ಸಾಧ್ಯತೆ ಇದೆ. ಹೀಗಾಗಿ ತುರ್ತು ವಿಚಾರಣೆಗೆ ವಿನಯ್ ಕುಲಕರ್ಣಿ ಪರ ವಕೀಲರು ಮನವಿ ಮಾಡಿದರು. ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಸಿಬಿಐ ವಕೀಲರಿಗೆ ಸೂಚನೆ ನೀಡಿತು. ವಿಚಾರಣೆಯನ್ನು ಹೈಕೋರ್ಟ್ ವಿಭಾಗಿಯ ಪೀಠ ಜೂನ್ 1ಕ್ಕೆ ಮುಂದೂಡಿತು.








