ಬೆಂಗಳೂರು: ಬಿಜೆಪಿ ಗೂಂಡಾಪಡೆಯನ್ನು ಪೋಷಿಸುತ್ತಿರುವ ಬಸವರಾಜ ಬೊಮ್ಮಾಯಿ ( Basavaraj Bommai ) ಅವರೇ, ಸಿದ್ದರಾಮಯ್ಯನವರ ಕಾರಿಗೆ ಮೊಟ್ಟೆ ಎಸೆದದ್ದನ್ನು ತಾವು ಎಂಜಾಯ್ ಮಾಡುತ್ತಿರಬಹುದು, ಆದರೆ ಅದೇ ಗೂಂಡಾಪಡೆ ನಳೀನ್ ಕುಮಾರ್ ಕಟೀಲ್ ( Nalin Kumar Kateel ) ಅವರ ಕಾರ್ ಉರುಳಿಸಲು ಹೊರಟಿತ್ತು. ಮುಂದಿನ ಸರದಿ ನಿಮ್ಮದಿರಬಹುದು. ಹಾವಿಗೆ ಹಾಲೆರೆಯುತ್ತಿದ್ದೀರಿ, ಅದು ವಿಷವಲ್ಲದೆ ಅಮೃತ ಕಕ್ಕುವುದಿಲ್ಲ. ನೆನಪಿರಲಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್( Karnataka Congress ), ಸಿಎಂ ಬೊಮ್ಮಾಯಿಯವರನ್ನು ಕುಟುಕಿದೆ.
ಬಿಜೆಪಿ ಗೂಂಡಾಪಡೆಯನ್ನು ಪೋಷಿಸುತ್ತಿರುವ @BSBommai ಅವರೇ,
ಸಿದ್ದರಾಮಯ್ಯನವರ ಕಾರಿಗೆ ಮೊಟ್ಟೆ ಎಸೆದದ್ದನ್ನು ತಾವು ಎಂಜಾಯ್ ಮಾಡುತ್ತಿರಬಹುದು,ಆದರೆ ಅದೇ ಗೂಂಡಾಪಡೆ @nalinkateel ಅವರ ಕಾರ್ ಉರುಳಿಸಲು ಹೊರಟಿತ್ತು. ಮುಂದಿನ ಸರದಿ ನಿಮ್ಮದಿರಬಹುದು.
ಹಾವಿಗೆ ಹಾಲೆರೆಯುತ್ತಿದ್ದೀರಿ, ಅದು ವಿಷವಲ್ಲದೆ ಅಮೃತ ಕಕ್ಕುವುದಿಲ್ಲ. ನೆನಪಿರಲಿ.
— Karnataka Congress (@INCKarnataka) August 19, 2022
ಈ ಕುರಿತು ಸರಣಿ ಟ್ವಿಟ್ ಮಾಡಿದ್ದು, ಜನರ ಕಷ್ಟವನ್ನು ತಾವೂ ಕೇಳುವುದಿಲ್ಲ, ಬೆರೆಯವರೂ ಕೇಳಬಾರದು ಎಂಬ ಧೋರಣೆ ಬಿಜೆಪಿ ಸರ್ಕಾರದ್ದು. ಅತಿವೃಷ್ಟಿಗೆ ಕೈಗೊಂಡ ಕ್ರಮಗಳೇನು, ನೀಡಿದ ಪರಿಹಾರವೇನು? ಉತ್ತರಿಸುವ ಧೈರ್ಯ ಸರ್ಕಾರಕ್ಕಿದೆಯೇ? ಇದುವರೆಗೂ ನಷ್ಟದ ಸರ್ವೆ ನಡೆಸದೆ, ಪರಿಹಾರ ಘೋಷಿಸದೆ ಕುರ್ಚಿ ಕಸರತ್ತಿನಲ್ಲಿ ಮುಳುಗಿದ ಸರ್ಕಾರ ಈಗ ವಿಪಕ್ಷಗಳನ್ನು ತಡೆಯುತ್ತಿದೆ ಎಂಬುದಾಗಿ ಹೇಳಿದೆ.
ಜನರ ಕಷ್ಟವನ್ನು ತಾವೂ ಕೇಳುವುದಿಲ್ಲ, ಬೆರೆಯವರೂ ಕೇಳಬಾರದು ಎಂಬ ಧೋರಣೆ @BJP4Karnataka ಸರ್ಕಾರದ್ದು.
ಅತಿವೃಷ್ಟಿಗೆ ಕೈಗೊಂಡ ಕ್ರಮಗಳೇನು, ನೀಡಿದ ಪರಿಹಾರವೇನು?
ಉತ್ತರಿಸುವ ಧೈರ್ಯ ಸರ್ಕಾರಕ್ಕಿದೆಯೇ?ಇದುವರೆಗೂ ನಷ್ಟದ ಸರ್ವೆ ನಡೆಸದೆ, ಪರಿಹಾರ ಘೋಷಿಸದೆ ಕುರ್ಚಿ ಕಸರತ್ತಿನಲ್ಲಿ ಮುಳುಗಿದ ಸರ್ಕಾರ ಈಗ ವಿಪಕ್ಷಗಳನ್ನು ತಡೆಯುತ್ತಿದೆ.
— Karnataka Congress (@INCKarnataka) August 19, 2022
‘ಸಿದ್ಧರಾಮಯ್ಯ ಅವರ ಮೇಲೆ ನಿನ್ನೆಯಷ್ಟೇ ಅಲ್ಲ, ಇಂದೂ ಸಹ ಚಿಕ್ಕಮಗಳೂರಿನಲ್ಲಿ ದಾಳಿಗೆ ಯತ್ನಿಸಲಾಗಿದೆ. ಸರ್ಕಾರ ಏಕೆ ಎಚ್ಚೆತ್ತುಕೊಳ್ಳಲಿಲ್ಲ? ರಕ್ಷಣಾ ಕ್ರಮವನ್ನು ಏಕೆ ಬಿಗಿಗೊಳಿಸಲಿಲ್ಲ? ಸರ್ಕಾರ ಅನಾಹುತಗಳು ಸಂಭವಿಸಲಿ ಎಂದು ಬಯಸುತ್ತಿದೆಯೇ? ಕೊಡಗಿನಲ್ಲಾದ ಘಟನೆಯನ್ನು ಚಿಕ್ಕಮಗಳೂರಿನಲ್ಲೂ ಜರುಗಲು ಬಿಟ್ಟಿದ್ದೇಕೆ ಗೃಹಸಚಿವರೇ? ಎಂದು ಪ್ರಶ್ನಿಸಿದೆ.
'@siddaramaiah ಅವರ ಮೇಲೆ ನಿನ್ನೆಯಷ್ಟೇ ಅಲ್ಲ, ಇಂದೂ ಸಹ ಚಿಕ್ಕಮಗಳೂರಿನಲ್ಲಿ ದಾಳಿಗೆ ಯತ್ನಿಸಲಾಗಿದೆ.
ಸರ್ಕಾರ ಏಕೆ ಎಚ್ಚೆತ್ತುಕೊಳ್ಳಲಿಲ್ಲ? ರಕ್ಷಣಾ ಕ್ರಮವನ್ನು ಏಕೆ ಬಿಗಿಗೊಳಿಸಲಿಲ್ಲ? ಸರ್ಕಾರ ಅನಾಹುತಗಳು ಸಂಭವಿಸಲಿ ಎಂದು ಬಯಸುತ್ತಿದೆಯೇ?
ಕೊಡಗಿನಲ್ಲಾದ ಘಟನೆಯನ್ನು ಚಿಕ್ಕಮಗಳೂರಿನಲ್ಲೂ ಜರುಗಲು ಬಿಟ್ಟಿದ್ದೇಕೆ ಗೃಹಸಚಿವರೇ?
— Karnataka Congress (@INCKarnataka) August 19, 2022
‘ಸಿದ್ಧರಾಮಯ್ಯ ಅವರು ಸಾಗುವ ದಾರಿಯಲ್ಲಿ ಹಾಗೂ ಅವರ ಆಗಮಿಸುವ ಸ್ಥಳದಲ್ಲೇ ಬಿಜೆಪಿ ಗೂಂಡಾಗಳು ಜಾಮಾಯಿಸಿದ್ದರೂ, ಮುನ್ಸೂಚನೆ ಇದ್ದರೂ ಪೊಲೀಸರು ಅವರನ್ನು ವಶಕ್ಕೆ ಪಡೆಯದೆ ಅವರ ರಕ್ಷಣೆಗೇ ನಿಂತಿದ್ದರು. ಗೂಂಡಾಗಳಿಗೆ ರಕ್ಷಣೆ ನೀಡುವುದು ಸರ್ಕಾರದ ನಿರ್ದೇಶನವಾಗಿತ್ತೇ? ಕರ್ತವ್ಯಲೋಪವೆಸಗಿದ ಕೊಡಗು ಜಿಲ್ಲಾ SPಯನ್ನು ಕೂಡಲೇ ಅಮಾನತುಗೊಳಿಸಿ ಎಂದು ಒತ್ತಾಯಿಸಿದೆ.
'@siddaramaiah ಅವರು ಸಾಗುವ ದಾರಿಯಲ್ಲಿ ಹಾಗೂ ಅವರ ಆಗಮಿಸುವ ಸ್ಥಳದಲ್ಲೇ ಬಿಜೆಪಿ ಗೂಂಡಾಗಳು ಜಾಮಾಯಿಸಿದ್ದರೂ, ಮುನ್ಸೂಚನೆ ಇದ್ದರೂ ಪೊಲೀಸರು ಅವರನ್ನು ವಶಕ್ಕೆ ಪಡೆಯದೆ ಅವರ ರಕ್ಷಣೆಗೇ ನಿಂತಿದ್ದರು.
ಗೂಂಡಾಗಳಿಗೆ ರಕ್ಷಣೆ ನೀಡುವುದು ಸರ್ಕಾರದ ನಿರ್ದೇಶನವಾಗಿತ್ತೇ?
ಕರ್ತವ್ಯಲೋಪವೆಸಗಿದ ಕೊಡಗು ಜಿಲ್ಲಾ SPಯನ್ನು ಕೂಡಲೇ ಅಮಾನತುಗೊಳಿಸಿ.
— Karnataka Congress (@INCKarnataka) August 19, 2022