ಉಜಿರೆ : ನೀವು ಮಾಡುವ ಸ್ವ ಉದ್ಯೋಗದಿಂದ ಇತರಿಗೆ ಉದ್ಯೋಗ ನೀಡುವುದರ ಮೂಲಕ ನಿಮ್ಮ ಉದ್ಯಮಕ್ಕೆ ನೀವೇ ಬಾಸ್ ಆಗುತ್ತೀರಿ. ಸರಕಾರ ಮತ್ತು ಬ್ಯಾಂಕಿನಿಂದ ಆರ್ಥಿಕ ನೆರವು ಪಡೆದುಕೊಂಡ ಕೃಷಿಯನ್ನು ಒಂದು ಉದ್ಯಮವನ್ನಾಗಿ ಮಾಡಲು ತುಂಬಾ ಅವಕಾಶ ಇದೆ. ಕೃಷಿ ಚಟುವಟಿಕೆಗೆ ಬ್ಯಾಂಕ್ ಇವತ್ತು ಕಡಿಮೆ ಬಡ್ಡಿ ದರದಲ್ಲಿ ಬೇಕಾದಷ್ಟು ಸಾಲ ನೀಡುತ್ತದೆ. ಅದರ ಸದುಪಯೋಗ ಮಾಡಿಕೊಂಡು ನೀವು ಕೃಷಿ ಉದ್ಯಮಿಯಾಗಿ ಜೊತೆಗೆ ಇತರರನ್ನು ಸಹ ಬ್ಯಾಂಕಿನ ನೆರವು ಪಡೆದುಕೊಳ್ಳುವಂತೆ ಪ್ರೇರಣೆ ನೀಡಿ ಎಂದು ಕೆನರಾ ಬ್ಯಾಂಕ್ ಮಂಗಳೂರು ವೃತ್ತ ಕಛೇರಿಯ ಮಾಹಾ ಪ್ರಬಂಧಕರಾದ ಸುಧಾಕರ ಕೊಟ್ಟಾರಿ ಅಭಿಪ್ರಾಯ ಪಟ್ಟರು.
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದೆ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ಮತ್ತು ಕೆನರಾ ಬ್ಯಾಂಕಿನಲ್ಲಿ ಹೊಸತಾಗಿ ಆರಂಭಿಸಿದ ಜನಧನ್ ಖಾತೆ ಹಾಗೂ ಕೆನರಾ ಏಂಜಲ್ ಖಾತೆಯ ಪುಸ್ತಕ, ವಿತ್ತರಿಸಿ ಮಾತನಾಡಿದರು. ಸ್ವ ಉದ್ಯೋಗ ನಮ್ಮ ಹೆಮ್ಮೆಯ ವೃತ್ತಿ ಯಾಗಬೇಕು. ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮ ದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ NRLM ಘಟಕದ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಹರಿಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕೃಷಿ ಸಖಿಯ ಕಾರ್ಯವೈಖರಿಯ ಬಗ್ಗೆ ಮಾಹಿತಿ ನೀಡಿ ಶುಭ ಹಾರೈಸಿದ್ದಾರೆ.
ಕಾರ್ಯಕ್ರಮ ದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ.ವಿಜಯ ಕುಮಾರ್ ಉಪಸ್ಥಿತರಿದ್ದರು. ಭಾಗವಹಿಸಿದ್ದರು.
ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು.
‘ದ್ವಿತೀಯ PU ಪರೀಕ್ಷೆ-3’ರಲ್ಲಿ ಪಾಸ್ ಆದವರಿಗೆ ಬಿಗ್ ಶಾಕ್: ‘ವೃತ್ತಿಪರ ಕೋರ್ಸ್ ಪ್ರವೇಶ’ಕ್ಕೆ ಪರಿಗಣನೆಯಿಲ್ಲ
ಸಾರ್ವಜನಿಕರ ಗಮನಕ್ಕೆ: ‘ಮುತ್ತತ್ತಿ ಪ್ರವಾಸಿ ತಾಣ’ಕ್ಕೆ ಪ್ರವಾಸಿಗರ ಭೇಟಿಗೆ ನಿಷೇಧ