ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ, ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು, ಕಾಂಗ್ರೆಸ್ ಬಿಜೆಪಿ ಗದ್ದಲ ಗಲಾಟೆ ನಡುವೆ ಪರಿಷತ್ ಕಲಾಪವನ್ನು ಅನಿರ್ದಿಷ್ಟವಧಿಗೆ ಮುಂದೂಡಿದರು. ಈ ಸಂದರ್ಭದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸಿಟಿ ಅವರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.
ಸಭಾಪತಿ ಬಸವರಾಜ್ ಹೊರಟ್ಟಿ ಅವರು ಕಲಾಪವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿ ತೆರಳಿದ ಬಳಿಕವೂ ಅಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಭಾರಿ ಗಲಾಟೆ ನಡೆಯಿತು ಈ ಸಂದರ್ಭದಲ್ಲಿ ಸಚಿವೆ ಹೆಬ್ಬಾಳ್ಕರ್ ಅವರು ಸಭಾಪತಿ ಹೊರಟ್ಟಿ ಅವರ ಕುರ್ಚಿಯ ಸಮೀಪ ತೆರಳಿ ಸಿಟಿ ರವಿ ಅವರಿಗೆ ಹಿಗ್ಗಾ ಮುಗ್ಗಾ ಜಾಡಿಸಿದರು. ಏಯ್, ನಿನಗೆ ಮಗಳು ಇಲ್ವೇನೋ? ನಿನಗೆ ತಾಯಿ ಇಲ್ವೇನೋ? ನಿನಗೆ ಹೆಂಡತಿ ಇಲ್ವಾ? ಎಂದು ಏಕವಚನದಲ್ಲೇ ಆಕ್ರೋಶ ಹೊರ ಹಾಕಿದರು.