ಮೈಸೂರು : ಮಾಜಿ ಸಚಿವ ಕೆ ಎನ್ ರಾಜಣ್ಣರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿಯಾಗಿದ್ದರು ಈ ವೇಳೆ ಕೆ.ಎನ್ ರಾಜಣ್ಣರನ್ನು ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿದ್ದು ಅಧಿಕಾರದಲ್ಲಿದ್ದಾಗ ಮಾಡಿದ್ದನ್ನು ನಾನು ಮಾಡಿದೆ ಅಂತ ಹೇಳಬಾರದು ಎಂದು ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಂಕ್ರಾಂತಿ ಬೆಳೆಯ ರಾಜ್ಯ ಕಾಂಗ್ರೆಸ್ ನಲ್ಲಿ ಕ್ರಾಂತಿ ಆಗಲಿದೆ ಎನ್ನುವ ವಿಚಾರವಾಗಿ ಯಾವ ಕ್ರಾಂತಿಯಾಗಿಲ್ಲ ಏನು ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ಕೆ.ಎನ್ ರಾಜಣ್ಣರನ್ನು ಅಪೇಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾನೇ ಎಂದು ಡಿಕೆ ಶಿವಕುಮಾರ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅಪೇಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ಎಸ್ಎಂ ಕೃಷ್ಣ ಮತ್ತು ಅಂದಿನ ಸರ್ಕಾರ. ಅಧಿಕಾರದಲ್ಲಿದ್ದಾಗ ಮಾಡಿದ್ದನ್ನು ನಾನು ಮಾಡಿದೆ ಅಂತ ಹೇಳಬಾರದು ಸರ್ಕಾರ ಇರುತ್ತದೆ ಅಧಿಕಾರ ಕೊಡುತ್ತದೆ ಎಂದು ತಿಳಿಸಿದರು.
ಎಲ್ಲರಿಗಿಂತ ಪಕ್ಷ ದೊಡ್ಡದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರವಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವುದು ಸರಿಯಾಗಿದೆ ನಾವು ಮೊದಲಿನಿಂದಲೂ ವ್ಯಕ್ತಿಗಿಂತ ಪಕ್ಷ ದೊಡ್ಡದು ಅಂತ ಹೇಳುತ್ತಾ ಬಂದಿದ್ದೇವೆ ಎಲ್ಲರೂ ಖರ್ಗೆ ಅವರ ಮಾತನ್ನು ಒಪ್ಪಬೇಕು ಸ್ಥಳೀಯ ಮಟ್ಟದಲ್ಲಿ ಸಮಸ್ಯೆಯ ಬಗೆಹರಿಸಬೇಕೆಂದು ಖರ್ಗೆ ಅವರು ಹೇಳಿದ್ದಾರೆ. ಏನೇ ಸಮಸ್ಯೆಗಳಿದ್ದರೂ ಪಕ್ಷದ ಹೈಕಮಾಂಡ್ ಬಗೆಹರಿಸುತ್ತದೆ ರಾಹುಲ್ ಗಾಂಧಿ ಏನು ಹೇಳುತ್ತಾರೋ ಅದನ್ನು ಕೇಳುತ್ತೇವೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ.
ಡಿಕೆ ಶಿವಕುಮಾರ್ ರಿಂದ ಶಾಸಕ ಕೆ ಎನ್ ರಾಜಣ್ಣ ಅವರನ್ನು ಭೇಟಿ ಮಾಡಿದ ವಿಚಾರವಾಗಿ ರಾಜನರನ್ನು ಡಿಕೆ ಶಿವಕುಮಾರ್ ಭೇಟಿ ಮಾಡಿದರೆ ತಪ್ಪೇನಿದೆ ಡಿಕೆ ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷ ಅವರನ್ನು ಭೇಟಿ ಮಾಡಬಾರದು ಅಂತ ಏನಾದರೂ ಇದೆಯಾ ಡಿಸಿಎಂ ಡಿಕೆ ಶಿವಕುಮಾರ್ ರಾಜಣ್ಣ ಭೇಟಿಯಲ್ಲಿ ಯಾವುದೇ ತಪ್ಪು ಇಲ್ಲ ಎಂದು ತಿಳಿಸಿದರು.








