ಹಾಸನ: ಜಿಲ್ಲೆಯಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಅವರ ಕಾರು ಅಪಘಾತಗೊಂಡಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದೆ.
ಹಾಸನದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಂತ ವೇಳೆಯಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಅವರ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಹಾಸದನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಅವರ ಸ್ಥಿತಿ ಚಿಂತಾಜನಕವಾಗಿದೆಯಂತೆ. ಅಲ್ಲದೇ ಅವರನ್ನು ಬೇರೊಂದು ಆಸ್ಪತ್ರೆಗೂ ಸಾಗಿಸದಂತ ಕ್ರಿಟಿಕಲ್ ಸ್ಥಿತಿಯಲ್ಲಿದ್ದಾರಂತೆ.
ಈ ವಿಖಯ ತಿಳಿದು ಆಸ್ಪತ್ರೆಗೆ ದಕ್ಷಿಣ ವಲಯದ ಐಜಿಪಿ ಡಾ.ಬೋರಲಿಂಗಯ್ಯ ಭೇಟಿ ನೀಡಿ, ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆದರು. ಜೊತೆಗೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಕೂಡ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Watch Video: ಫೆಂಗಲ್ ಚಂಡಮಾರುತ ಎಫೆಕ್ಟ್: ಲ್ಯಾಂಡ್ ಆಗಲು ಪರದಾಡಿ ಮತ್ತೆ ಹಾರಿದ ವಿಮಾನ, ವಿಡಿಯೋ ವೈರಲ್
ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ: ಡಿಸಿಎಂ ಡಿ.ಕೆ ಶಿವಕುಮಾರ್