Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾತ್ರಿ ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ಈ ಟೀ ಟ್ರೈ ಮಾಡಿ, ಒತ್ತಡ ಕಡಿಮೆಯಾಗಿ ನೆಮ್ಮದಿಯ ನಿದ್ದೆ ಬರುತ್ತೆ!

01/07/2025 10:11 PM

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM

BREAKING : ಟ್ರಂಪ್ ಬೆಂಬಲಿತ ‘ತೆರಿಗೆ ಕಡಿತ, ಖರ್ಚು ಮಸೂದೆ’ಗೆ ‘ಅಮೆರಿಕ ಸೆನೆಟ್’ ಅಂಗೀಕಾರ

01/07/2025 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಮ್ಮದು ‘CABINET OF KARNATAKA’ ಅಲ್ಲ, ಅದು CABINET OF CONSPIRACY : ಸಿಎಂ ವಿರುದ್ಧ HDK ಕಿಡಿ
KARNATAKA

ನಿಮ್ಮದು ‘CABINET OF KARNATAKA’ ಅಲ್ಲ, ಅದು CABINET OF CONSPIRACY : ಸಿಎಂ ವಿರುದ್ಧ HDK ಕಿಡಿ

By kannadanewsnow0525/05/2024 2:38 PM

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅಶ್ಲೀಲ ವಿಡಿಯೋ ಹಂಚಿಕೆ ಮಾಡಿದ್ದು ತಪ್ಪು ಎಂಬ ಹೇಳಿಕೆಗೆ ಹೆಚ್‍ಡಿ ಕುಮಾರಸ್ವಾಮಿ ಟ್ವೀಟ್ ನಲ್ಲಿ ತಿರುಗೇಟು ನೀಡಿದ್ದು,ನಿಮ್ಮದು ‘CABINET OF KARNATAKA’ ಅಲ್ಲ, ಅದು CABINET OF CONSPIRACY ಎಂದು ಸಿಎಂ ವಿರುದ್ಧ HDK ಕಿಡಿ ಕಾರಿದ್ದಾರೆ.

ಟ್ವೀಟ್ ನಲ್ಲಿ ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು ಹೇಳುತ್ತಿದ್ದೇನೆ ಸಿದ್ದರಾಮಯ್ಯನವರೇ.

ಮೈಸೂರಿನಲ್ಲಿ ಇವತ್ತು ಬೆಳಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೀರಿ “ನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು, ಹರಡುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ! ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ? ಅದನ್ನು ಯಾವ ಸೆಕ್ಷನ್‌ನಲ್ಲಿ ಉಲ್ಲೇಖಿಸಿದ್ದಾರೆ? ಕುಮಾರಸ್ವಾಮಿ ಪ್ರಕಾರ ಯಾವುದಾದರೂ ಹೊಸ ಸೆಕ್ಷನ್ ಇದ್ದರೆ ಹೇಳಲಿ” ಎಂದು ನನಗೆ ಪ್ರಶ್ನೆ ಮಾಡಿದ್ದೀರಿ.

ನಿಜ, ನೀವು ಸ್ವಯಂಘೋಷಿತ ಸಂವಿಧಾನ ತಜ್ಞರು! ಪ್ರ(ಕು)ಖ್ಯಾತ ಮಾಜಿ ವಕೀಲರು!! ಹಾಲಿ ಮುಖ್ಯಮಂತ್ರಿಗಳು. ಆದರೂ ನಿಮ್ಮ ಪ್ರಶ್ನೆಗೆ ಉತ್ತರ ಕೊಡುವುದು ನನ್ನ ಧರ್ಮ. ಆದರೆ, ನಿಮಗೆ ಈ ಪರಿ ಅಜ್ಞಾನವೇ ಎನ್ನುವುದು ನನಗೆ ಸೋಜಿಗ. ಮಾತೆತ್ತಿದರೆ, ‘ನಾನು ಲಾಯರ್ ಗಿರಿ ಮಾಡ್ತಾ ಇದ್ದೆ. ಸುಮ್ಕೆ ಕೂತ್ಕಳಿ’ ಎಂದು ಎಲ್ಲರ ಬಾಯಿ ಮುಚ್ಚಿಸುತ್ತಿದ್ದ ನೀವು, ಈಗ ನೀವೇ ಬಾಯಿ ಮುಚ್ಚಿಕೊಳ್ಳುವ ಪರಿಸ್ಥಿತಿ ಬಂದಿದೆ.

ಇದೇ ಕಾರಣಕ್ಕೆ ನಾನು ನಿಮ್ಮನ್ನು ಅತ್ಯಂತ ವಿನಮ್ರತೆಯಿಂದ ವಿನಂತಿ ಮಾಡಿಕೊಂಡಿದ್ದು, ‘ದಯಮಾಡಿ ವಕೀಲಿಕೆ ಮಾಡಬೇಡಿ’ ಎಂದು. ಕಾನೂನಿನ ಬಗ್ಗೆ ಸಾಸಿವೆ ಕಾಳಿನಷ್ಟು ತಿಳಿವಳಿಕೆ ಇಲ್ಲದವರೊಬ್ಬರು ‘ನಾನೂ ವಕೀಲ.. ನಾನೂ ವಕೀಲಿಕೆ ಮಾಡ್ತಾ ಇದ್ದೆ’ ಎಂದು ಹೇಳಿಕೊಳ್ಳುವುದು ಗೌರವಾನ್ವಿತ ವಕೀಲ ಸಮುದಾಯಕ್ಕೆ ಮಾಡುವ
ಅಪಚಾರ. ತಮಗೆ ಇನ್ನಾದರೂ ಇರಲಿ ಶಿಷ್ಟಾಚಾರ.

“ನೊಂದ ಮಹಿಳೆಯರ ವಿಡಿಯೋಗಳನ್ನು ಹಂಚುವುದು ಅಪರಾಧ ಎಂದು ಯಾವ ಸೆಕ್ಷನ್ ನಲ್ಲಿ ಹೇಳಿದ್ದಾರೆ” ಎಂದು ಒಂದನೇ ಕ್ಲಾಸು ಮಗುವಿನಂತೆ ಕೇಳಿದ್ದೀರಿ! ನಿಮ್ಮ ಸರಕಾರದ ಅಧೀನದಲ್ಲಿರುವ, ನೀವೇ ಆದೇಶಿಸಿ ರಚನೆ ಮಾಡಿಸಿರುವ ವಿಶೇಷ ತನಿಖಾ ತಂಡ (SIT) ಹೊರಡಿಸಿರುವ ಪತ್ರಿಕಾ ಪ್ರಕಟಣೆ, ರೂಪಿಸಿರುವ ಕಾನೂನುಬದ್ಧ ನಿಯಮಗಳು ‘ಸಾಕ್ಷಾತ್ ಸಿಎಂ’ ಆಗಿರುವ ನಿಮ್ಮ ಗಮನಕ್ಕೇ ಬಂದಿಲ್ಲವೆಂದರೆ!!??ತಾವು ಸರಕಾರ ನಡೆಸುತ್ತಿರುವಿರೋ ಅಥವಾ ವಿಧಾನಸೌಧವನ್ನು ಟೈಮ್ ಪಾಸ್ ಕ್ಲಬ್ ಮಾಡಿಕೊಂಡಿರುವಿರೋ..?

ನಿಮ್ಮ ಘನತವೇತ್ತ ಅವಗಾಹನೆಗೆ SIT ಹೊರಡಿಸಿರುವ ಪ್ರತಿಕಾ ಪ್ರಕಟಣೆಯನ್ನು ಇಲ್ಲಿ ಲಗತ್ತಿಸಿದ್ದೇನೆ. ದಯಮಾಡಿ ಓದಿಕೊಳ್ಳಿ, ಅರ್ಥ ಮಾಡಿಕೊಳ್ಳಿ.. ನೀವು ಕೇಳಿದ ಎಲ್ಲಾ ಸೆಕ್ಷನ್ ಗಳು ಅದರಲ್ಲಿಯೇ ಇವೆ. ಒಂದಲ್ಲಾ.. ಹತ್ತಾರು ಸಲ ಓದಿ ಮನನ ಮಾಡಿಕೊಳ್ಳಿ.

ನಿಮ್ಮನ್ನು ಅಪಮಾನಿಸುತ್ತಿದ್ದೇನೆ ಎಂದು ಅನ್ಯತಾ ಭಾವಿಸಬೇಡಿ. ವಯಸ್ಸಿನಲ್ಲಿ ಹಿರಿಯರು, ಹೆಚ್ಚು ಅನುಭಸ್ಥರು ನೀವು. ಆದರೆ, ಪೆನ್ ಡ್ರೈವ್ ಪ್ರಕರಣದಲ್ಲಿ ನಿಮ್ಮ ನಡವಳಿಕೆ ಪ್ರಶ್ನಾರ್ಹ. ಅಮಾಯಕ ಹೆಣ್ಮಕ್ಕಳ ಮಾನವನ್ನು ವೋಟಿಗೆ ಒತ್ತೆ ಇಟ್ಟ ಕ್ರಿಮಿನಲ್ ಅನ್ನು ಪಕ್ಕದಲ್ಲೇ ಕೂರಿಸಿಕೊಂಡು ಮಾತನಾಡುತ್ತಿದ್ದೀರಿ. ಸಂವಿಧಾನಬದ್ಧವಾಗಿ ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿ ಸಂವಿಧಾನ ದ್ರೋಹಿ ಕೃತ್ಯ ಎಸಗಿರುವ ವ್ಯಕ್ತಿ ನಿಮ್ಮ ಸಂಪುಟದಲ್ಲಿ ಉಪ ಮುಖ್ಯಮಂತ್ರಿ!! ಇದಕ್ಕಿಂತ ನಿರ್ಲಜ್ಜತೆ ಉಂಟೇ?

ನೀವು, ನಿಮ್ಮ ಇಡೀ ಕಾಂಗ್ರೆಸ್ ಪಕ್ಷ CD ಶಿವು ರಕ್ಷಣೆಗೆ ಟೊಂಕ ಕಟ್ಟಿ ನಿಂತಿದ್ದೀರಿ. ನಿಮ್ಮ ಇಡೀ ಕ್ಯಾಬಿನೆಟ್ ಆ ವ್ಯಕ್ತಿಯ ಹಿತಾಸಕ್ತಿಗಾಗಿ, ಆತ ರೂಪಿಸಿರುವ ಒಳಸಂಚಿನಲ್ಲಿ ಭಾಗಿಯಾಗಿದೆ.ನಿಮ್ಮದು CABINET OF KARNATAKA ಅಲ್ಲ, ಅದು CABINET OF CONSPIRACY!! ಬಹಳ ನೊಂದು ಈ ಮಾತು ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

•ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು ಹೇಳುತ್ತಿದ್ದೇನೆ @siddaramaiah ನವರೇ..… pic.twitter.com/AwI9R1G43p

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 25, 2024

Share. Facebook Twitter LinkedIn WhatsApp Email

Related Posts

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM1 Min Read

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM1 Min Read

ಗಮನಿಸಿ: ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ

01/07/2025 9:46 PM1 Min Read
Recent News

ರಾತ್ರಿ ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ಈ ಟೀ ಟ್ರೈ ಮಾಡಿ, ಒತ್ತಡ ಕಡಿಮೆಯಾಗಿ ನೆಮ್ಮದಿಯ ನಿದ್ದೆ ಬರುತ್ತೆ!

01/07/2025 10:11 PM

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM

BREAKING : ಟ್ರಂಪ್ ಬೆಂಬಲಿತ ‘ತೆರಿಗೆ ಕಡಿತ, ಖರ್ಚು ಮಸೂದೆ’ಗೆ ‘ಅಮೆರಿಕ ಸೆನೆಟ್’ ಅಂಗೀಕಾರ

01/07/2025 9:56 PM

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM
State News
KARNATAKA

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0901/07/2025 9:56 PM KARNATAKA 1 Min Read

ಬೆಂಗಳೂರು: ದಶಕದ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣಪ್ರಮಾಣದಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಯುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಸೌಧದಲ್ಲಿ…

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM

ಗಮನಿಸಿ: ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ

01/07/2025 9:46 PM

ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ

01/07/2025 9:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.