ಬೆಂಗಳೂರು: ಅಪರಿಚಿತ ವಾಹನವೊಂದು ಬೈಕ್‌ಗೆ ಗುದ್ದಿದ ಪರಿಣಾಮ ಜಾಲಹಳ್ಳಿ ರಾಕ್‌ಲೈನ್ ಮಾಲು ಮುಂಭಾಗದ ಫ್ಲೈ ಓವರ್ ಮೇಲೆ ನಡೆದಿದೆ.
ಮೃತ ಯುವಕನನ್ನು ತುಮಕೂರು ಮೂಲಕದ ಪ್ರಸಾದ್ ಎನ್ನಲಾಗಿದೆ. ಪ್ರಸಾದ್ ಸವಾರಿ ಮಾಡುತ್ತಿದ್ದ ದ್ವಿಚಕ್ರವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ. ಘಟನೆ ಸಂಬಂಧ ಜಾಲಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪ್ರಸಾದ್ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ವಿಕ್ಟೋರಿಯ ಆಸ್ಪತ್ರೆಗೆ ಸಾಗಿಸಲಾಗಿದೆ ಅಂತ ತಿಳಿದು ಬಂದಿದೆ.