ಬೆಂಗಳೂರು: ಶಿವಮೊಗ್ಗ ನಗರದಲ್ಲಿ ಈ ತಿಂಗಳ 12ರಂದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ʼಯುವನಿಧಿʼ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು ಈ ಸಂಬಂಧ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಫಲಾನುಭವಿಗಳಿಗೆ ನೇರ ಹಣ ಪಾವತಿಸುವ ಈ ಯೋಜನೆಯ ಉದ್ಘಾಟನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಉನ್ನತ ಮಟ್ಟದ ಸಭೆಯಲ್ಲಿ ರೂಪುರೇಷೆಗಳನ್ನು ರೂಪಿಸಲಾಯಿತು. ಘೋಷಿಸಿದ್ದಂತೆ ಈಗಾಗಲೆ ನಾಲ್ಕು ಮಹತ್ತರ ಗ್ಯಾರೆಂಟಿ ಯೋಜನೆಗಳು ಯಶಸ್ವಿಯಾಗಿ ಜನಪ್ರಿಯಗೊಂಡಿದ್ದು, ಯುವಜನರ ಆಶೋತ್ತರಗಳಿಗೆ ಪೂರಕವಾದ ʼಯುವಶಕ್ತಿʼ ಯೋಜನೆಯನ್ನು ರಾಜ್ಯದ ಯುವಜನರಿಗೆ ಸಮರ್ಪಿಸುವ ಕಾರ್ಯಕ್ರಮವನ್ನು ಆಕರ್ಷಕವಾಗಿ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಹಿರಿಯ ಅಧಿಕಾರಿಗಳಾದ ಉಮಾ ಮಹೇಶ್ವರನ್, ಡಾ.ಏಕರೂಪ್ ಕೌರ್, ಡಾ.ಹೇಮಂತ ನಿಂಬಾಳ್ಕರ್ ಮುಂತಾದವರು ಭಾಗವಹಿಸಿದ್ದರು.
Good News : ‘ಕನಿಷ್ಠ ಬ್ಯಾಲೆನ್ಸ್’ ವಿಷಯದಲ್ಲಿ ‘RBI’ ಮಹತ್ವದ ನಿರ್ಧಾರ : ಈ ಖಾತೆದಾರರಿಗೆ ಬಿಗ್ ರಿಲೀಫ್
ಗಮನಿಸಿ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ