ರಾಮನಗರ: ಚುಂಚಿನಫಾಲ್ಸ್ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಕನಕಪುರದಲ್ಲಿ ನಡೆದಿದೆ.
HEALTH TIPS: ಪ್ರತಿನಿತ್ಯ ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಅಪಾಯ…! ತಜ್ಞರ ಸಲಹೆ
26ವರ್ಷದ ಪ್ರವೀಣ್ ಚಂದ್ರ ಮೃತ ಯುವಕ. ಈತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಮೊನ್ನೆ ರಜೆ ಇರುವ ಕಾರಣ ತನ್ನ ಇಬ್ಬರು ಸ್ನೇಹಿತರ ಜೊತೆ ಚುಂಚಿಫಾಲ್ಸ್ ಗೆ ಬಂದಿದ್ದರು. ಈ ವೇಳೆ ಸ್ನೇಹಿತರೆಲ್ಲ ಸ್ಥಳದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಇಂದು ಚುಂಚಿಪಾಲ್ಸ್ ನಿಂದ ಒಂದು ಕಿಲೋಮೀಟರ್ ದೂರದಲ್ಲಿದೆ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.