ಪಿಸ್ತೂಲ್ ನಿಂದ ಆಕಸ್ಮಿಕವಾಗಿ ಹಾರಿದ ಗುಂಡು: ಯುವಕನಿಗೆ ಗಂಭೀರ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ

ಮಂಗಳೂರು: ಪಿಸ್ತೂಲ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ, ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರಿನ ಹೊರವಲಯದ ಮೂಡುಶೆಡ್ಡದಲ್ಲಿ ಸೆಕೆಂಡ್ ಹ್ಯಾಂಡ್ ವಸ್ತುಗಳ ಮಾರಾಟ ಮಳಿಗೆಯಲ್ಲಿ ಈ ಘಟನೆ ನಡೆದಿದೆ. ಪರವಾನಗಿ ಹೊಂದಿದ್ದಂತ ಪಿಸ್ತೂಲ್ ಅನ್ನು ಕ್ಲೀನ್ ಮಾಡುತ್ತಿದ್ದಂತ ಸಂದರ್ಭದಲ್ಲಿ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಯುವಕ ಸಫ್ವಾನ್(25) ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಸಫ್ವಾನ್ ಅನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೀಗ ಯುವಕ ಸಫ್ವಾನ್ ಶಸ್ತ್ರಚಿಕಿತ್ಸೆಯ ಬಳಿಕ ಚೇತರಿಸಿಕೊಳ್ಳುತ್ತಿರುವುದಾಗಿ … Continue reading ಪಿಸ್ತೂಲ್ ನಿಂದ ಆಕಸ್ಮಿಕವಾಗಿ ಹಾರಿದ ಗುಂಡು: ಯುವಕನಿಗೆ ಗಂಭೀರ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ