ಮಂಡ್ಯ : ಅನುಮಾನಸ್ಪಾದವಾಗಿ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿರುವ ಘಟನೆ ಮದ್ದೂರು ತಾಲೂಕಿನ ಬೆಸಗರಹಳ್ಳಿ ಪೋಲೀಸ್ ಠಾಣಾ ವ್ಯಾಪ್ತಿಯ ಕೋಣಸಾಲೆ ಗ್ರಾಮದಲ್ಲಿ ಜರುಗಿದೆ.
ಕೋಣಸಾಲೆ ಗ್ರಾಮದ ಪ್ರೀತಮ್ ( 26 ) ಮೂರು ದಿನಗಳ ಹಿಂದೆ ಕಾಣೆಯಾಗಿದ್ದಾನೆ ಎಂದು ಬೆಸಗರಹಳ್ಳಿ ಪೋಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ಪೋಲೀಸರು ತನಿಖೆ ಕೈಗೊಂಡಿದ್ದರು. ಆದರೆ, ಪ್ರೀತಮ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕೋಣಸಾಲೆ – ಮರಳಿಗ ಗ್ರಾಮಗಳ ಮಧ್ಯೆ ಹಾದು ಹೋಗಿರುವ ವಿಶ್ವೇಶ್ವರಯ್ಯ ನಾಲೆಯಲ್ಲಿ ಭಾನುವಾರ ಮೃತದೇಹ ಕಂಡು ಬಂದಿದೆ.
ಸ್ಥಳೀಯ ನಿವಾಸಿಗಳು ಬೆಸಗರಹಳ್ಳಿ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಮದ್ದೂರು ಗ್ರಾಮಾಂತರ ಇನ್ಸ್ಪೆಕ್ಟರ್ ವೆಂಕಟೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಂತರ ಪೋಷಕರಿಗೆ ಹಸ್ತಾಂತರ ಮಾಡಲಾಯಿತು.
ಈ ಸಂಬಂಧ ಬೆಸಗರಹಳ್ಳಿ ಪೋಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವಿರುದ್ಧ ಕಾಂಗ್ರೆಸ್ ವಕ್ತಾರ ಅನಿಲ್ ಕುಮಾರ್.ಟಿ ವಾಗ್ಧಾಳಿ