ಬೆಂಗಳೂರೂ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು 2023 ರ ಡಿಸೆಂಬರ್, 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ.
BREAKING: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ CBI ದಾಳಿ!
ವಿದೇಶ ಕೊರೋನಾ ಲಸಿಕೆ ಪಡೆದವರಲ್ಲಿ 13 ಆರೋಗ್ಯ ಸಮಸ್ಯೆ: ಆತಂಕ ಮೂಡಿಸಿದ ವರದಿ!
BREAKING:ಫೆಮಾ ಉಲ್ಲಂಘನೆ : ‘ಬೈಜು ರವೀಂದ್ರನ್’ ವಿರುದ್ಧ ಇಡಿ ‘ಲುಕ್ ಔಟ್ ಸುತ್ತೋಲೆ’
2023 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1800 599 9918 ಗೆ ಕರೆ ಮಾಡುವ ಮೂಲಕ ಅಥವಾ ಆಯಾ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಯನ್ನು ಬೇಟಿ ಮಾಡಬಹುದಾಗಿದೆ.