ಬೆಂಗಳೂರು: ನಗರದಲ್ಲಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ಸಂಪಿಗೆಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ 80 ಅಡಿ ರಸ್ತೆಯಲ್ಲಿನ ಖಾಲಿ ಜಾಗದ ಶೆಡ್ ನಲ್ಲಿ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಖಾಲಿ ಜಾಗದಲ್ಲಿ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿಯ ವೇಳೆಯಲ್ಲಿ ಉಂಟಾದಂತ ಜಗಳ ತಾರಕ್ಕೇರಿದಾಗ ಟೈಲ್ಸ್ ಕೆಲಸ ಮಾಡುತ್ತಿದ್ದಂತ ಪುಷ್ಪರಾಜ್(27) ಎಂಬ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಕುಡಿದ ಮತ್ತಿನಲ್ಲಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇಂದು ಸಂಜೆ 4.30ರ ವೇಳೆಗೆ ಪುಷ್ಪರಾಜ್ ಶವ ಪತ್ತೆಯಾಗಿದ್ದು, ವಿಷಯ ತಿಳಿದು ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Good News: ರಾಜ್ಯದ ‘833 ವಸತಿ ಶಾಲೆ’ಗಳಿಗೆ ‘ದೂರದರ್ಶಕ’ ಪೂರೈಕೆ: ಸಚಿವ ಎನ್.ಎಸ್ ಭೋಸರಾಜು