ಶಿವಮೊಗ್ಗ: ಜಿಲ್ಲೆಯಲ್ಲಿ ಜನವರಿ.12ರಂದು ಯುವನಿಧಿ ಯೋಜನೆಯ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ನಗರದಲ್ಲಿನ ಶಾಲೆಗಳ ಸಮಯವನ್ನು ಬದಲಾವಣೆ ಮಾಡಲಾಗಿದೆ.
ಈ ಕುರಿತಂತೆ ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿವಮೊಗ್ಗ ನಗರದ ಎಲ್ಲಾ ಶಾಲೆಗಳಿಗೆ ಅಧಿಕೃತ ಜ್ಞಾಪನೆ ಹೊರಡಿಸಿದ್ದು, ದಿನಾಂಕ 12-01-2024ರಂದು ಶಿವಮೊಗ್ಗ ನಗರದಲ್ಲಿ ಕರ್ನಾಟಕ ಸರ್ಕಾರದ ಯುವನಿಧಿ ಕಾರ್ಯ್ಕಮದ ಉದ್ಘಾಟನಾ ಸಮಾರಂಭವಿರುತ್ತದೆ. ಸಿಎಂ ಸಿದ್ಧರಾಮಯ್ಯ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಲಿದ್ದಾರೆ. ಆ ದಿನದಂದು ನಗರದಲ್ಲಿ ಜನ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ ಎಂದಿದ್ದಾರೆ.
ಇದಲ್ಲದೇ ಶಿವಮೊಗ್ಗ ನಗರದ ಹಲವು ರಸ್ತೆಗಳು ಬಂದ್ ಮಾಡಲಾಗುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲೆಗೆ ಬಂದು ಹೋಗಲು ತೊಂದರೆಯಾಗದಂತೆ ಶಿವಮೊಗ್ಗ ನಗರದ ಶಾಲೆಗಳಿಗೆ ಮಾತ್ರ ಅನ್ವಯಿಸುವಂತೆ ದಿನಾಂಕ 12-01-2024ರಂದು ಶಾಲಾ ವೇಳೆಯನ್ನು ಬದಲಾವಣೆ ಮಾಡಲಾಗಿದೆ ಅಂತ ಹೇಳಿದ್ದಾರೆ.
ಜನವರಿ.12, 2024ರಂದು ಶಿವಮೊಗ್ಗ ನಗರದ ಶಾಲೆಗಳು ಬೆಳಿಗ್ಗೆ 9 ಗಂಟೆಗೆ ಪ್ರಾರಂಭಿಸಿ, ಸಂಜೆ 4 ಗಂಟೆಗೆ ಬಿಡುವಂತೆ ತಿಳಿಸಿದ್ದಾರೆ. ಶಾಲಾ ವಾಹನಗಳು ಬೆಳಿಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ರಸ್ತೆಗಿಳಿಯದಂತೆ ಕ್ರಮ ವಹಿಸಲು ಖಾಸಗಿ ಶಾಲಾ ಆಡಳಿತ ಮಂಡಳಿಯವರು ಕ್ರಮವಹಿಸುವಂತೆ ಸೂಚಿಸಿದ್ದಾರೆ.
ವಿದ್ಯಾರ್ಥಿಗಳು ಬೆಳಿಗ್ಗೆ 9 ಗಂಟೆಯೊಳಗೆ ಶಾಲೆಗೆ ತಲುಪಿ, ಸಂಜೆ 4 ಗಂಟೆಯ ನಂತ್ರ ಶಾಲೆಯಿಂದ ತೆರಳುವಂತೆ ಕ್ರಮವಹಿಸೋದಕ್ಕೆ ಶಿವಮೊಗ್ಗ ನಗರದ ಎಲ್ಲಾ ಶಾಲೆಗಳ ಮುಖ್ಯಸ್ಥರಿಗೆ ಬಿಇಒ ತಿಳಿಸಿದ್ದಾರೆ.
ಕರ್ನಾಟಕದ ‘ರಾಮನ ಭಕ್ತ’ರಿಗೆ ಶಾಕ್: ‘ಬೆಂಗಳೂರು-ಅಯೋಧ್ಯೆ’ ವಿಮಾನ ಪ್ರಯಾಣ ದರ ಶೇ.400ರಷ್ಟು ಏರಿಕೆ
‘ಯುವನಿಧಿ ಯೋಜನೆ’ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ‘ಶಿವಮೊಗ್ಗ ಸಜ್ಜು’