ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಯುವನಿಧಿಯಲ್ಲಿ ನೋಂದಾಣಿ ಮಾಡಿಕೊಂಡಿರುವವರು ಪ್ರತಿ ತಿಂಗಳು ಪ್ರತಿ ತಿಂಗಳು ಉದ್ಯೋಗ ಇಲ್ಲದ ಬಗ್ಗೆ ಸ್ವಯಂ ಘೋಷಣೆ ಮಾಡಬೇಕಾಗಿದೆ.
ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ ಎಂದು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಅಭ್ಯರ್ಥಿಗಳಿಗೆ ಎಸ್‌ಎಂಎಸ್ ರವಾನಿಸಲಾಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆ ಹೊಂದಿರತಕ್ಕದ್ದು. ಸ್ವಯಂ ಘೋಷಣೆಗೆ sevasindhugs.karnataka.gov.in ವೆಬ್ ಸೈಟ್ ವೀಕ್ಷಿಸಬಹುದು. ವಿವರಗಳಿಗೆ ದೂ.ಸಂ. 080-25189112 ಸಂಪರ್ಕಿಸಬಹುದಾಗಿದೆ.