ಬೆಂಗಳೂರು: ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಫಲಾನುಭವಿಗಳು, ಯೋಜನೆಯ ಸೌಲಭ್ಯ ಪಡೆಯಲು ಪ್ರತಿ ತಿಂಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿಯಲ್ಲ, ನಿರುದ್ಯೋಗಿ ಎಂದು ಸ್ವಯಂ ಘೋಷಣೆ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.
ಈ ಮಾಹೆಯಲ್ಲಿ ಫೆ.29ರ ಒಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಸ್ವಯಂ ಘೋಷಣೆ ಪತ್ರ ಸಲ್ಲಿಸಲು ಕಾಲಾವಕಾಶವಿದೆ. 2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವಿ, ಸ್ನಾತಕೊತ್ತರ ಪದವಿ ಮತ್ತು ಡಿಪ್ಲೋಮಾ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೆÇೀರ್ಟಲ್‍ನಲ್ಲಿ ನೋಂದಣಿಯಾಗಿದ್ದು, ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿ ತಿಂಗಳ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದ್ದು, ಫೆಬ್ರವರಿ ತಿಂಗಳ ಪ್ರಯೋಜನ ಪಡೆದುಕೊಳ್ಳಲು ಸ್ಚಯಂ ಘೋಷಣೆ ಮಾಡಬೇಕಾಗಿದೆ. ಫಲಾನುಭವಿಗಳಿಗೆ ಎಸ್‍ಎಂಎಸ್ ಮೂಲಕ ಸಂದೇಶ ರವಾನಿಸಲಾಗುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಫಲಾನುಭವಿಗಳು ಯುವ ನಿಧಿ ಯೋಜನೆಯ ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs.karnataka.gov.in/ ವೆಬ್‍ಸೈಟ್‍ಗೆ ಭೇಟಿ ನೀಡಬಹುದು. ಪ್ರಯೋಜನೆ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಪ್ರಮಾಣ ಪತ್ರ ನೀಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊ.8861866725, 9964502514 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ