ರಾಯಚೂರು: ರಾಜ್ಯದಲ್ಲಿ ಮೊದಲ ಬಾರಿಗೆ ಝೀಕಾ ವೈರಸ್​ ಪತ್ತೆಯಾಗಿದೆ. ರಾಯಚೂರಿನ ಮಾನ್ವಿ ತಾಲೂಕಿನ ನೀರಮಾನ್ವಿ ಗ್ರಾಮದ ಐದು ವರ್ಷದ ಬಾಲಕಿಗೆ ಈ ವೈರಸ್‌ ಪತ್ತೆಯಾಗಿದೆ. ಇದರಿಂದಾಗಿ ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಹೀಗಾಗಿ ಕಟ್ಟು ನಿಟ್ಟಿನ ಕ್ರಮ ವಹಿಸಲು ಸರ್ಕಾರ ಮುಂದಾಗಿದೆ.

BIGG NEWS: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಆರೋಪಿ ಶಾರಿಕ್ ಆರೋಗ್ಯದಲ್ಲಿ ಚೇತರಿಕೆ

 

ಈ ಕುರಿತು ಆರೋಗ್ಯ ಇಲಾಖೆ ಬೇರೆ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ್ದಾರೆ. .ಬಾಲಕಿಗೆ ಸೋಂಕು ದೃಢವಾಗಿರುವ ಹಿನ್ನೆಲೆ ನೀರಮಾನವಿಯ ಕೋಳಿ ಕ್ಯಾಂಪ್ ಹಾಗೂ ನೀರಮಾನ್ವಿ, ನೀರಮಾನವಿ ತಾಂಡಾ, ರಾಧಾಕೃಷ್ಣ ಕ್ಯಾಂಪ್, ಹರವಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಎಲ್ಲಾ ಗ್ರಾಮಗಳಲ್ಲಿ ಜನರ ರಕ್ತದ ಮಾದರಿಗಳನ್ನು ಸಂಗ್ರಹಿಸುವಂತೆ ತಿಳಿಸಲಾಗಿದೆ. ಜೊತೆಗೆ ಈ ಗ್ರಾಮಗಳಲ್ಲಿ ಸೊಳ್ಳೆಗಳು ಹೆಚ್ಚಾಗದಂತೆ ಫಾಗಿಂಗ್ ಮಾಡಿಸುವಂತೆ ಸೂಚನೆ ನೀಡಿದ್ದಾರೆ.

BIGG NEWS: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಆರೋಪಿ ಶಾರಿಕ್ ಆರೋಗ್ಯದಲ್ಲಿ ಚೇತರಿಕೆ

 

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ಮಾತನಾಡಿ, ಆರೋಗ್ಯ ಸಚಿವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರ ಆದೇಶದಂತೆ ಝೀಕಾ ವೈರಸ್ ಹರಡದಂತೆ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಸೂಕ್ತ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

Share.
Exit mobile version