ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ದಿನಾಂಕ ಹತ್ತಿರ ವಾಗುತ್ತಿದ್ದಂತೆ, ದೇವಾಲಯದ ಕುರಿತ ಹಲವು ಮಾಹಿತಿಗಳನ್ನು ಟ್ರಸ್ಟ್ ಹಂಚಿಕೊಂಡಿದೆ. ಇತ್ತೀಚಿಗೆ ಟ್ವೀಟ್ ಮೂಲಕ ಹಲವು ಮಾಹಿತಿಗಳನ್ನು ನೀಡಿದೆಯಾಗಿದೆ.
ಅಯೋಧ್ಯೆ ರಾಮ ಮಂದಿರದ ಪ್ರಮುಖ ವೈಶಿಷ್ಟ್ಯಗಳು :
– ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಾಣ
– 380 ಅಡಿ ಉದ್ದ (ಪೂರ್ವ-ಪಶ್ಚಿಮ), 250 ಅಡಿ ಅಗಲ ಮತ್ತು 161 ಅಡಿ ಎತ್ತರವನ್ನು ಹೊಂದಿದೆ.
– ಮೂರು ಅಂತಸ್ತಿನದ್ದಾಗಿದ್ದು, ಪ್ರತಿ ಮಹಡಿಯು 20 ಅಡಿ ಎತ್ತರವಿದೆ. ಇದು ಒಟ್ಟು 392 ಕಂಬಗಳು ಮತ್ತು 44 ಬಾಗಿಲುಗಳನ್ನು ಹೊಂದಿದೆ.
– ಮುಖ್ಯ ಗರ್ಭಗುಡಿಯಲ್ಲಿ ಭಗವಾನ್ ಶ್ರೀರಾಮನ ಬಾಲ್ಯದ ರೂಪ (ಬಾಲರಾಮ) ವಿಗ್ರಹ, ಮೊದಲ ಮಹಡಿಯಲ್ಲಿ ಶ್ರೀರಾಮ ದರ್ಬಾರ್ ಇರುತ್ತದೆ.
– ನೃತ್ಯ ಮಂಟಪ, ರಂಗ ಮಂಟಪ, ಸಭಾ ಮಂಟಪ, ಪ್ರಾರ್ಥನೆ ಮತ್ತು ಕೀರ್ತನ ಮಂಟಪ ಎಂಬ ಐದು ಮಂಟಪಗಳು (ಹಾಲ್) ಇವೆ.
– ದೇವತೆಗಳು, ದೇವರು ಮತ್ತು ದೇವತೆಗಳ ಪ್ರತಿಮೆಗಳನ್ನು ಕಂಬ ಮತ್ತು ಗೋಡೆಗಳ ಮೇಲೆ ಕೆತ್ತಲಾಗಿದೆ.
– ಪೂರ್ವದಿಂದ ಸಿಂಹದ್ವಾರದ ಮೂಲಕ ಮಂದಿರಕ್ಕೆ ಪ್ರವೇಶ. 32 ಮೆಟ್ಟಿಲುಗಳು ಇರಲಿವೆ.
– ಅಂಗವಿಕಲರು ಮತ್ತು ವೃದ್ಧರ ಅನುಕೂಲಕ್ಕಾಗಿ ಇಳಿಜಾರು ಮತ್ತು ಲಿಫ್ಟ್ ಇವೆ.
– ಆವರಣದ ನಾಲ್ಕು ಮೂಲೆಗಳಲ್ಲಿ ಸೂರ್ಯ ದೇವ, ದೇವಿ ಭಗವತಿ, ಗಣೇಶ ಮತ್ತು ಶಿವನ ಮಂದಿರ ಇದೆ.
– ಉತ್ತರದಲ್ಲಿ ಅನ್ನಪೂರ್ಣ ಮಂದಿರ, ದಕ್ಷಿಣದಲ್ಲಿ ಹನುಮಂತನ ಮಂದಿರವಿದೆ.
– ಮಂದಿರ ನಿರ್ಮಾಣ ವೇಳೆ ಎಲ್ಲಿಯೂ ಕಬ್ಬಿಣ ಬಳಸುವುದಿಲ್ಲ
– ಅಗ್ನಿ ಸುರಕ್ಷತೆಗಾಗಿ ನೀರು ಸರಬರಾಜು ಮತ್ತು ಸ್ವತಂತ್ರ ವಿದ್ಯುತ್ ಕೇಂದ್ರವನ್ನು ಹೊಂದಿದೆ.
– ಯಾತ್ರಾರ್ಥಿಗಳಿಗೆ ವೈದ್ಯಕೀಯ ಸೌಲಭ್ಯಗಳು, ಲಾಕರ್ ಸೌಲಭ್ಯ ಇದೆ
– ಸ್ನಾನದ ಪ್ರದೇಶ, ವಾಶ್ರೂಮ್ಳು, ವಾಶ್ಬಾಸಿನ್, ತೆರೆದ ಟ್ಯಾಪ್ಗಳು ಇತ್ಯಾದಿಗಳೊಂದಿಗೆ ಪ್ರತ್ಯೇಕ ಬ್ಲಾಕ್ ನಿರ್ಮಾಣ