ಯಾದಗಿರಿ: ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ನಗನೂರು ಗ್ರಾಮದ ಹೈಯಾಳಪ್ಪ (11), ಶರಣಬಸವ (10) ಹಾಗೂ ಅನಿಲ್ (10) ಮೃತ ಬಾಲಕರು ಎಂದು ತಿಳಿದು ಬಂದಿದೆ.
ಮೃತ ಬಾಲಕರ ಶವ ಹೊರತೆಗೆದಿದ್ದಾರೆ.ಯಾದಗಿರಿ ಎಸ್ಪಿ ಸಂಗೀತಾ.ಜಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಬಾಲಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಶಹಾಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.