ಬೆಂಗಳೂರು : ಕೆಂದ ಸರ್ಕಾರ ಹಿಟ್ ಆ್ಯಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ಜಾರಿ ಮಾಡಬಾರದು ಎಂಬದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಡರೇಷನ್ ಕರ್ನಾಟಕ ಲಾರಿ ಮಾಲೀಕರ ಸಂಘದಿಂದ ಬುಧವಾರ ದಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ.
ಈ ಮುಷ್ಕರದಿಂದಾಗಿ ಸುಮಾರು ಎರಡು ಲಕ್ಷ ಲಾರಿಗಳಸೇರಿ ಆಫ್ ಸಂಚಾರ ಸ್ಥಬ್ದವಾಗಲಿದೆ ಎನ್ನಲಾಗುತ್ತಿದೆ. ಆದರೆ, ಫೆಡರೇಷನ್ ಆಫ್ ಕರ್ನಾಟಕ ಲಾರಿ ಮಾಲೀಕರ ಮತ್ತು ಏಜೆಂಟರ ಸಂಘ ಮುಷ್ಕರಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಲಾರಿ ಮುಷ್ಕರ ಯಶಸ್ವಿಯಾಗುವ ಬಗ್ಗೆ ಅನುಮಾನ ಮೂಡಿಸಿದೆ ಎಂದು ಹೇಳಲಾಗುತ್ತಿದೆ.
ಅಪಘಾತ ನಡೆಸಿ ಪರಾರಿಯಾದ ಪ್ರಕರಣದಲ್ಲಿ ಲಾರಿ ಚಾಲಕರಿಗೆ 10 ವರ್ಷ ಜೈಲು ಹಾಗೂ 7 ಲಕ್ಷ ರು. ದಂಡ ವಿಧಿಸುವ ಕುರಿತು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ಮುಂದಾಗಿತ್ತು. ಅದನ್ನು ವಿರೋಧಿಸಿ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಲಾರಿ ಮಾಲೀಕರು ಮತ್ತು ಚಾಲಕರು ಮುಷ್ಕರ ನಡೆಸಿದ್ದರು. ಕೊನೆಗೆ ಕೇಂದ್ರ ಕಠಿಣ ನಿಯಮ ಜಾರಿಯಿಂದ ಹಿಂದೆಸರಿದಿತ್ತು.
ಅಲ್ಲದೆ ಲಾರಿ ಸಂಘಗಳೊಂದಿಗೆ ಮಾತುಕತೆ ನಡೆಸುವುದಾ ಗಿಯೂ ತಿಳಿಸಲಾಗಿತ್ತು. ಹೀಗಾಗಿ ಮುಷ್ಕರವನ್ನೂ ಹಿಂಪಡೆಯಲಾಗಿತ್ತು. ಆದರೀಗ ಆ ನಿಯಮ ಜಾರಿಯಿಂದ ಸಂಪೂರ್ಣವಾಗಿ ಹಿಂದೆ ಸರಿದಿರುವುದಾಗಿ ಘೋಷಿಸುವಂತೆ ಆಗ್ರಹಿಸಿ ಫೆಡರೇಷನ್ ಆಫ್ ಕರ್ನಾಟಕ ಲಾರಿ ಮಾಲೀಕರು ಮುಷ್ಕರ ನಡೆಸಲಿದ್ದಾರೆ.