ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಬಳಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಹಾರಾಷ್ಟ್ರದ ಸಿಎಂ ಏಕನಾಥ ಶಿಂಧೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ತಿಳಿಸಿದ್ದರು. ಇವರ ಹೇಳಿಕೆಗೆ ಸಚಿವ ಎಮ್ ಬಿ ಪಾಟೀಲ್ ತೆಲುಗು ನೀಡಿದ್ದು ಚುನಾವಣೆಯ ಬಳಿಕ ಒಂದೇ ತಿಂಗಳಲ್ಲಿ ಮಹಾರಾಷ್ಟ್ರ ಸರ್ಕಾರ ಬೀಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಹಾರಾಷ್ಟ್ರದಲ್ಲಿ ಏಕನಾಥ ಶಿಂಧೆ ಮಾಜಿ ಆಗುತ್ತಾರೆ ಎಂದು ಬೆಂಗಳೂರಿನಲ್ಲಿ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದರು. ಮಹಾರಾಷ್ಟ್ರದಲ್ಲಿ 30 ರಿಂದ 40 ಶಾಸಕರು ನಮ್ಮ ಕಡೆ ಬರುತ್ತಾರೆ ಎಂದು ಸ್ಪೋಟಕವಾದ ಮಾಹಿತಿ ತಿಳಿಸಿದರು.
ಎಲ್ಲರೂ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಳಿ ಹೋಗುತ್ತಾರೆ.NCP ಕಡೆಯು ಹೋಗುತ್ತಾರೆ.ಚುನಾವಣೆ ಮುಗಿದ ತಿಂಗಳ ಬಳಿಕ ಸರ್ಕಾರ ಬೀಳಲಿದೆ. ಅಜಿತ್ ಪವಾರ್ ಶಾಸಕರನ್ನ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ.ವಾಪಸ್ ಶಿವಸೇನೆ ನಾಯಕರು ಉದ್ಧವ್ ಠಾಕ್ರೆ ಬಳಿ ಹೋಗುತ್ತಾರೆ ಎಂದು ಬೆಂಗಳೂರಿನಲ್ಲಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದರು.