ದಾವಣಗೆರೆ : ಚೆನ್ನಗಿರಿ ಘಟನೆಯ ವೇಳೆ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ ಎಂದು ದಾವಣಗೆರೆ SP ಉಮಾ ಪ್ರಶಾಂತ್ ಸ್ಪಷ್ಟನೆ ನೀಡಿದ್ದಾರೆ. ಮೇ 24 ರಂದು ಚೆನ್ನಗಿರಿ ಠಾಣೆಯ ಮುಂದೆ ಪ್ರತಿಭಟನೆ ವೇಳೆ ಕಲ್ಲುತೂರಾಟ ನಡೆಸಲಾಗಿತ್ತು.
ಈ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪ ಕೇಳಿ ಬಂದಿತ್ತು ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹರಿದಾಡುತ್ತಿದೆ.ಈ ಬಗ್ಗೆ ಪರಿಶೀಲಿಸಿದ್ದು ಪಾಕಿಸ್ತಾನ ಜಿಂದಾಬಾದ್ ಅಂತ ಯಾರು ಘೋಷಣೆ ಕೂಗಿಲ್ಲ. ಪರಿಶೀಲಿಸಲಾದ ವಿಡಿಯೋ ದಲ್ಲಿ ಪೊಲೀಸರಿಗೆ ಧಿಕ್ಕಾರ ಎಂದು ಕೂಗಿದ್ದಾರೆ ಎಂದು ಅವರು ತಿಳಿಸಿದರು.
ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ವಿಡಿಯೋ ಲಭ್ಯವಿದ್ದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ಅಥವಾ ಸ್ಥಳೀಯ ಠಾಣೆಗೆ ಮಾಹಿತಿ ನೀಡಿದರೆ ಸೂಕ್ತವಾದಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಸ್ ಪಿ ಉಮಾ ಪ್ರಶಾಂತ್ ತಿಳಿಸಿದರು. ಯಾವುದೇ ಕಾರಣಕ್ಕೂ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಸುಳ್ಳು ಸುದ್ದಿಗಳನ್ನು ಹರಡಬಾರದು ಸಾರ್ವಜನಿಕರಿಗೆ ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ಸೂಚನೆ ನೀಡಿದರು.
ಮಟ್ಕಾ ಆಡುತ್ತಿದ್ದ ಎಂದು ಆರೋಪಿಸಿ ಆದಿಲ್ ಎನ್ನುವ ವ್ಯಕ್ತಿಯನ್ನು ಚೆನ್ನಗಿರಿ ಠಾಣೆ ಪೋಲಿಸ್ರು ಬಂಧಿಸಿದ್ದರು. ಈ ವೇಳೆ ಠಾಣೆಯಲ್ಲಿ ಆದಿಲ್ ಕುಸಿದು ಬಿದ್ದಿದ್ದ ತಕ್ಷಣ ಅದನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಆದಿಲ್ ಆಗಲೇ ಮೃತಪಟ್ಟಿದ್ದ. ಇದರಿಂದ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಹಲವರು ಠಾಣೆಯ ಮೇಲೆ ಕಲತೂರಾಟ ನಡೆಸಿದ್ದರು. ಈ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡಿತ್ತು. ಇದೀಗ ಈ ಒಂದು ಆರೋಪದ ಕುರಿತು ಎಸ್ ಪಿ ವಾಪಸ್ ಅಂತ ಸ್ಪಷ್ಟನೆ ನೀಡಿದ್ದಾರೆ.