ಬೆಂಗಳೂರು: ಎಲ್ಲವೂ ಸುಸೂತ್ರವಾಗಿ ನಡೆದರೆ ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್-ಬಿಜೆಪಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಎಎನ್ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಕುಮಾರಸ್ವಾಮಿ, “ನಮ್ಮ ಪಕ್ಷವನ್ನು ಬೇರೆ ಯಾವುದೇ ಪಕ್ಷದೊಂದಿಗೆ ವಿಲೀನಗೊಳಿಸುವ ಪ್ರಶ್ನೆಯೇ ಇಲ್ಲ. ಸ್ಪಷ್ಟವಾಗಿ, ನಾನು ನಿಮಗೆ ಹೇಳುತ್ತಿದ್ದೇನೆ. ಇದರಲ್ಲಿ ಯಾವ ಪ್ರಶ್ನೆಯೂ ಇಲ್ಲ. ಬಿಜೆಪಿ ನಮ್ಮನ್ನು ಚೆನ್ನಾಗಿ ನಡೆಸಿಕೊಂಡರೆ ಮತ್ತು ಎಲ್ಲವೂ ಸುಗಮವಾಗಿ ನಡೆದರೆ, ಜೆಡಿಎಸ್ ಅನ್ನು ಬಿಜೆಪಿಯಲ್ಲಿ ವಿಲೀನಗೊಳಿಸುವ ಪ್ರಶ್ನೆಯೇ ಇಲ್ಲ. ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಅಂತ ಹೇಳಿದರು.