ಮಂಡ್ಯ : ಮಂಡ್ಯದಲ್ಲಿ ಇಂದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ ಹಮ್ಮಿಕೊಂಡಿದ್ದು, ಇಂದು ಬೆಳಗ್ಗೆ 10:30 ಕ್ಕೆ ಸಕ್ಕರೆ ಕಾರ್ಖಾನೆ ಮೈದಾನದಲ್ಲಿ ಈ ಸಮಾವೇಶ ನಡೆಯಲಿದೆ. ಮಂಡ್ಯ ಕಾಂಗ್ರೆಸ್ ಶಾಸಕ ರವಿ ಗಣಿಗ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್ ಚೆಲುವರಾಯ ಸ್ವಾಮಿ ಸೇರಿದಂತೆ ಪಕ್ಷದ ಅನೇಕ ಮುಖಂಡರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.ಸುಮಾರು ಹತ್ತು ಸಾವಿರ ಜನರನ್ನು ಸೇರಿಸಿ ಕಾರ್ಯಕ್ರಮ ಮಾಡಲು ಯೋಜನೆ ರೂಪಿಸಿಕೊಳ್ಳಲಾಗಿದೆ.
ಇನ್ನು ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮದ್ವಜ ತೆರವು ಖಂಡಿಸಿ ನಿನ್ನೆ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಕೈಗೊಂಡಿದ್ದು ಮಾಜಿ ಸಚಿವ ಸಿಟಿ ರವಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಕೂಡ ಈ ಒಂದು ಪಾದಯಾತ್ರೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದರು.
ಇಂದು ಕಾಂಗ್ರೆಸ್ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ ಆಯೋಜನೆ ಮಾಡಿದ್ದು ಈ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಗಳಿಗೆ ಕೌಂಟರ್ ಕೊಡಲು ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಶಾಸಕ ರವಿ ಗಣಿಗ ನೇತೃತ್ವದಲ್ಲಿ ಈ ಒಂದು ಕಾರ್ಯಕ್ರಮ ನಡೆಯುತ್ತಿದ್ದು ಸಚಿವ ಚೆಲುವರಾಯ ಸ್ವಾಮಿ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಅನೇಕರು ಭಾಗವಹಿಸಲಿದ್ದಾರೆ.