ಬೆಂಗಳೂರು : ನಗರದಲ್ಲಿರುವ ಟ್ಯಾಂಕರ್ ಮಾಲೀಕರು ಮಾ.7ರ ಒಳಗಾಗಿ ನೋಂದಣಿ ಮಾಡಿಕೊಳ್ಳದಿದ್ದರೆ ಸೀಜ್ (ವಶಕ್ಕೆ) ಮಾಡಲಾಗು ವುದು. ಜತೆಗೆ, ಸಮಸ್ಯೆ ಪರಿಹಾರಗೊಳ್ಳುವವರೆಗೆ ನಿರುಪಯುಕ್ತ ಹಾಲಿನ ಟ್ಯಾಂಕರ್ಗಳನ್ನು ನೀರು ಪೂರೈಕೆಗೆ ಬಳಸುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
BREAKING:ಗರ್ಭಪಾತಕ್ಕೆ ಅನುಮತಿ ನೀಡುವ ಐತಿಹಾಸಿಕ ಮಸೂದೆ ಬೆಂಬಲಿಸಿದ ‘ಫ್ರಾನ್ಸ್ ಸೆನೆಟ್’
ರಾಜಧಾನಿ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನಗರದಲ್ಲಿ 3500ಕ್ಕೂ ಅಧಿಕ ನೀರು ಸರಬರಾಜು ಮಾಡುವ ಟ್ಯಾಂಕರ್ಗಳಿದ್ದು, ಮಾ.1ರಿಂದ ಮಾ.7ರವರೆಗೆ ನೋಂದಣಿಗೆ ಸೂಚಿಸಲಾಗಿದೆ. ಈಗಾಗಲೇ ನಾಲ್ಕು ದಿನ ಕಳೆ ದಿದ್ದು, 219 ಟ್ಯಾಂಕರ್ ಮಾಲೀಕರು ನೋಂದಣಿ ಮಾಡಿಕೊಂಡಿ ದ್ದಾರೆ. ಇನ್ನೂ ಮೂರು ದಿನ ಕಾಲಾವಕಾಶವಿದ್ದು, ಅಷ್ಟೊಳಗೆ ನೋಂದಣಿ ಮಾಡಿಕೊಳ್ಳಬೇಕು. ಇಲ್ಲವಾದರೆ, ಟ್ಯಾಂಕರ್ ಗಳನ್ನು ಸೀಜ್ ಮಾಡುತ್ತೇವೆ ಎಂದರು.
BIG NEWS : ಮುಂದಿನ ‘5 ವರ್ಷಗಳ’ ಕಾಲ ಸಿದ್ದರಾಮಯ್ಯ ಅವರೇ ‘ಮುಖ್ಯಮಂತ್ರಿ’ : ಪುತ್ರ ಯತೀಂದ್ರ ಹೇಳಿಕೆ
ನಗರದ ವಿವಿಧ ಭಾಗಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿರುವ ಹಿನ್ನೆಲೆಯಲ್ಲಿ ನಿನ್ನೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.ಬಿಬಿಎಂಪಿ ಹಾಗೂ ಜಲಮಂಡಳಿ ಅಧಿಕಾರಿಗಳು ಎರಡು-ಮೂರು ಬಾರಿ ಸಭೆ ನಡೆಸಿದರೂ ಪರಿಹಾರ ದೊರಕದ ಹಿನ್ನೆಲೆಯಲ್ಲಿ ಖುದ್ದು ಡಿ.ಕೆ.ಶಿವಕುಮಾರ್ ಸೋಮವಾರ ಸಭೆ ನಡೆಸಿ ಪ್ರಮುಖ ಸೂಚನೆಗಳನ್ನು ನೀಡಿದರು.