ಬೆಂಗಳೂರು : ಬೆಂಗಳೂರಿನಲ್ಲಿ ವೈಟ್ಫೀಲ್ಡ್ ನಲ್ಲಿ ಮಾರ್ಚ್ ಒಂದರಂದು ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್ಐಎ ಶಂಕಿತ ಮಾಜ್ ಮುನೀರ್ ತೀವ್ರ ವಿಚಾರಣೆಗೆ ಒಳಪಡಿಸಿದಾಗ ಪ್ರಕರಣದಲ್ಲಿ ಬಂಧಿತ ಶಂಕಿತ ಉಗ್ರ ಮಾಜ್ ಮುನೀರ್ ಕೈವಾಡವಿರುವುದು ಧೃಡವಾಗಿದೆ. ಶಂಕಿತ ಉಗ್ರ ಮಾಜ್ ಮುನೀರ್ ಎನ್ಐಎ (NIA) ಕಸ್ಟಡಿಯಲ್ಲಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬಾಯಿ ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮಾರ್ಚ್ 1 ರಂದು ರಾಮೇಶ್ವರಂ ಕೇಫೆಯಲ್ಲಿ ಸ್ಫೋಟ ಸಂಭವಿಸಿತ್ತು. ಇದಾದ ಬೆನ್ನಲ್ಲೇ ಎನ್ಐಎ ಅಧಿಕಾರಿಗಳು ಮಾರ್ಚ್ 4ರ ರಾತ್ರಿ ಪರಪ್ಪನ ಅಗ್ರಹಾರದ ಮೇಲೆ ದಾಳಿ ಮಾಡಿ, ಶಂಕಿತ ಉಗ್ರ ಮಾಜ್ ಮುನೀರ್ನನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಶಂಕಿತ ಉಗ್ರ ಮಾಜ್ ಮುನೀರ್ ಸತ್ಯ ಬಾಯಿಬಿಟ್ಟಿದ್ದಾನೆ.
ಮಾರ್ಚ್ 4ರ ರಾತ್ರಿ ಪರಪ್ಪನ ಅಗ್ರಹಾರ ಸೇರಿದಂತೆ ದೇಶದ 18 ಜೈಲುಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿ ಪರಿಶೀಲಿಸಿದ್ದರು. ಈ ಸಮಯದಲ್ಲಿ ಪರಪ್ಪನ ಅಗ್ರಹಾರದಲ್ಲಿದ್ದ ಶಂಕಿತ ಉಗ್ರ ಮಾಜ್ ಮುನೀರ್ನನ್ನು ಎನ್ಐಎ ಅಧಿಕಾರಿಗಳು ಎಂಟು ದಿನಗಳ ಕಾಲ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದರು.
ಎನ್ಐಎ ಅಧಿಕಾರಿಗಳು ಮಾಜ್ ಮುನೀರ್ ಇದ್ದ ಜೈಲು ಕೋಣೆಯನ್ನು ತಪಾಸಣೆ ನಡೆಸಿದಾಗ ನೋಟ್ ಬುಕ್ ಒಂದರಲ್ಲಿ ಕೆಲವು ಕೋಡ್ ವರ್ಡ್ ಬರೆಯಲಾಗಿತ್ತು. ಇವುಗಳನ್ನು ಡಿಕೋಡ್ ಮಾಡಿದಾಗ ಎನ್ಐಎ ಅಧಿಕಾರಿಗಳಿಗೆ, ಕೆಫೆ ಸ್ಫೋಟ ಸಂಬಂಧ ಲಿಂಕ್ ಲಭ್ಯವಾಗಿತ್ತು. ಮಾಜ್ ಮುನೀರ್ ಜೈಲಿನಲ್ಲಿದ್ದುಕೊಂಡೆ ಸ್ಫೋಟಕ್ಕೆ ಸಂಚು ರೂಪಿಸಿದ್ದನು ಎಂಬುವುದು ಇದೀಗ ಬಯಲಾಗಿದೆ.