ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣಾ ಅಖಾಡದಲ್ಲಿ ಕರ್ನಾಟಕ ರಾಜ್ಯದ ಮೂವರು ಮಾಜಿ ಮುಖ್ಯಮಂತ್ರಿಗಳು ಸಂಸತ್ತು ಪ್ರವೇಶಿಸಿದ್ದಾರೆ. ಬೆಳಗಾವಿಯಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಹಾವೇರಿಯಿಂದ ಸ್ಪರ್ದಿಸಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಂಡ್ಯದಿಂದ ಸ್ಪರ್ಧಿಸಿದ್ದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಭಾರಿ ಗೆಲುವು ಕಂಡು ಸಂಸತ್ತು ಪ್ರವೇಶಿಸಿದ್ದಾರೆ.
ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಇದಕ್ಕೂ ಮೊದಲೇ ಸಂಸದರಾಗಿದ್ದರು. ಆದರೆ, ಈಗ ಮತ್ತೆ ಲೋಕಸಭೆ ಪ್ರವೇಶಿಸುವುದಿಲ್ಲ ಎಂದೇ ಭಾವಿಸಲಾಗಿತ್ತು. ಬದಲಾದ ಮೈತ್ರಿ ರಾಜಕೀಯ ಸನ್ನಿವೇಶದಲ್ಲಿ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದಾರೆ.
ಇನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಲವೆಂದು ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ , ಇತ್ತೀಚಿಗೆ ಕಾಂಗ್ರೆಸ್ ಪಕ್ಷ ತೊರೆದು ಹಾಗೂ ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ ನೀಡಿ ಬಿಜೆಪಿಗೆ ವಾಪಸ್ ಆಗಿದ್ದರು ಇದೀಗ ಬೆಳಗಾವಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿ ಮೊದಲ ಬಾರಿಗೆ ಸಂಸತ್ತು ಪ್ರವೇಶಿಸಿದ್ದಾರೆ.
ಇನ್ನೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿ ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು, ಈಗ ಲೋಕಸಭೆ ಚುನಾವಣೆ ಕೂಡ ತಮ್ಮ ಅದೃಷ್ಟದ ಪರೀಕ್ಷೆಗೆ ಧೋಮ್ಕಿದರು ಇದೀಗ ಈ ಒಂದು ಪರೀಕ್ಷೆಯಲ್ಲಿ ಬಸವರಾಜ್ ಮೈಯವರು ಯಶಸ್ಸು ಆಗಿದ್ದು ಮೊದಲ ಬಾರಿಗೆ ಸಂಸತ್ತು ಪ್ರವೇಶಿಸುತ್ತಿದ್ದಾರೆ.