ಹುಬ್ಬಳ್ಳಿ : ನಿನ್ನೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಪ್ರಸಾದ್ ಅಬ್ಬಯ್ಯ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ಹೆಣದ ಮೇಲೆ ರಾಜಕಾರಣ ಮಾಡುವುದು ಸರಿಯಲ್ಲ. ಆರೋಪಿ ಫಯಾಜ್ ನಿಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಪ್ರಸಾದ್ ಅಬ್ಬಯ್ಯ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನೇಹಾ ಹಂತಕ ಫಯಾಜ್ಗೆ ಗಲ್ಲು ಶಿಕ್ಷೆ ಆಗಬೇಕೆಂದು ಬಯಸುತ್ತೇನೆ. ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿಕೆ ನೀಡಿದ್ದು,ಈ ಘಟನೆಯನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎನ್ನುವುದರ ಬಗ್ಗೆ ಮಾತನಾಡುವುದಿಲ್ಲ ಹೆಣದ ಮೇಲೆ ಯಾರು ಕೂಡ ರಾಜಕಾರಣವನ್ನ ಮಾಡಬಾರದು ಎಂದರು.
ಪೊಲೀಸ್ ಇಲಾಖೆ ಮಾಹಿತಿಯಂತೆ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ನೇಹಾ ಹಂತಕನಿಗೆ ಗಲ್ಲು ಶಿಕ್ಷೆ ಆಗಬೇಕು ಎಂದು ನಾನು ಒತ್ತಾಯಿಸುತ್ತೇನೆ.ಇಂತಹ ಪ್ರಕರಣದಲ್ಲಿ ಯಾವುದೇ ಜಾತಿ ಧರ್ಮವನ್ನು ನೋಡಬಾರದು ಆರೋಪಿಗಳಿಗೆ ಕಠಿಣ ಶಿಕ್ಷೆ ಆದರೆ ಮಾತ್ರ ನ್ಯಾಯ ಕೊಡಿಸಿದಂತೆ ಆಗುತ್ತದೆ ಎಂದು ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಹೇಳಿಕೆ ನೀಡಿದರು.