ದಕ್ಷನ ಮಗಳಾದ ದಾಕ್ಷಾಯಿಣಿಯು ಪರಶಿವನ ಹೆಂಡತಿ. ಹೀಗಾಗಿ ಪರಮೇಶ್ವರನು ದಕ್ಷನಿಗೆ ಸಂಬಂಧದಲ್ಲಿ ಅಳಿಯನಾಗಬೇಕು. ಒಂದು ದಿನ ತ್ರಿವೇಣೀಸಂಗಮದಲ್ಲಿ ದೇವತೆಗಳು ಏರ್ಪಡಿಸಿದ್ದ ಜ್ಞಾನ ಸತ್ರವೊಂದು ನಡೆಯುತ್ತಿತ್ತು. ಪರಶಿವನೇ ಆ ಸಭೆಯ ಅಧ್ಯಕ್ಷನಾಗಿದ್ದ. ಆಗ ದಕ್ಷನು ಅಲ್ಲಿಗೆ ಬಂದ. ಆಗ ಸಭೆಯಲ್ಲಿ ಇದ್ದ ದೇವತೆಗಳು ಮುನಿಗಳು ಎಲ್ಲರೂ ಎದ್ದು ನಿಂತು ನಮಸ್ಕರಿಸಿ ಆತನಿಗೆ ಗೌರವ ಸಲ್ಲಿಸಿದರು. ಆದರೆ, ಅಧ್ಯಕ್ಷ ಪೀಠದಲ್ಲಿದ್ದ ಕಾರಣ ಪರಮೇಶ್ವರನು ಎದ್ದು ಗೌರವ ಸೂಚಿಸಲಿಲ್ಲ. ಇದರಿಂದಾಗಿ ದಕ್ಷ ಕುಪಿತನಾದ. ಅಳಿಯನು ತನ್ನನ್ನು ಅವಮಾನಿಸಿದ ಎಂದೇ ಆತ ತಿಳಿದ. ಹೀಗಾಗಿ ಆ ಸಭೆಯಲ್ಲಿ ಕುಳಿತುಕೊಳ್ಳದೇ ಎಲ್ಲರೆದುರು ಅಳಿಯನಾದ ಶಿವನನ್ನು ನಿಂದಿಸಿ ಸಭೆಯನ್ನು ಧಿಕ್ಕರಿಸಿ ಹೊರನಡೆದ.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564
ತನ್ನ ಊರಿಗೆ ಹೋದವನೇ ತಾನೂ ಕೂಡಾ ಬಹಳ ವಿಜೃಂಭಣೆಯ ಒಂದು ಯಾಗವನ್ನು ಕೈಗೊಂಡ. ಅದಕ್ಕೆ ಸ್ವತಹ ಇದು “ನಿರೀಶ್ವರ ಯಾಗ” ಎಂದು ಹೆಸರಿಸಿಕೊಂಡ. ಅದರಲ್ಲಿ ಈಶ್ವರನನ್ನು ಹೊರತುಪಡಿಸಿ ಉಳಿದ ದೇವತೆಗಳೆಲ್ಲರಿಗೂ ಹವಿಸ್ಸನ್ನು ನೀಡಲು ತೀರ್ಮಾನಿಸಿದ. ಹೀಗಾಗಿ ಪ್ರಮೇಶ್ವರನನ್ನು ಹೊರತುಪಡಿಸಿ ಉಳಿದವರಿಗೆಲ್ಲ ಆಮಂತ್ರಣ ನೀಡಿದ.
ಆದರೆ, ಆ ಯಾಗಕ್ಕೆ ಹೋಗುತ್ತಿರುವ ಬ್ರಾಹ್ಮಣರ ಮೂಲಕ ದಾಕ್ಷಾಯಿಣಿಗೆ ತನ್ನ ತಂದೆಯು ಯಾಗವೊಂದನ್ನು ಮಾಡುತ್ತಿರುವ ವಿಷಯ ತಿಳಿಯುತ್ತದೆ. ಆಕೆ ಗಂಡನಾದ ಈಶ್ವರನಲ್ಲಿ ನಾವೂ ಕೂಡಾ ಆ ಯಾಗಕ್ಕೆ ಹೋಗೋಣ ಎಂದು ವಿನಂತಿಸುತ್ತಾಳೆ. ಆಗ ಈಶ್ವರನು ಹಿಂದೆ ತ್ರಿವೇಣೀ ಸಂಗಮದಲ್ಲಿ ನಡೆದ ಸಭೆಯ ವಿಚಾರವನ್ನು ಆಕೆಗೆ ತಿಳಿಸಿ, ನಿನ್ನ ತಂದೆ ಹಗೆ ಸಾಧನೆಗಾಗಿಯೇ ಈ ರೀತಿ ಮಾಡುತ್ತಿದ್ದಾನೆ, ಆದ್ದರಿಂದ ಹೋಗುವುದು ಬೇಡ ಎನ್ನುತ್ತಾನೆ. ಆದರೆ ತವರಿನ ಮೋಹದಿಂದಾಗಿ ದಾಕ್ಷಾಯಿಣಿಯು ಗಂಡನನ್ನು ಕಾಡಿಸಿ ಪೀಡಿಸಿ ನೀವು ಬಾರದೇ ಇದ್ದರೂ ಪರವಾಗಿಲ್ಲ, ನನ್ನನ್ನಾದರೂ ಕಳುಹಿಸಿ ಎನ್ನುತ್ತಾಳೆ. ಈಶ್ವರನು ಅದಕ್ಕೂ ಕೂಡಾ ಒಪ್ಪದೇ ನೀನೂ ಕೂಡಾ ಹೋಗುವುದು ಬೇಡ, ಹೋದರೆ ಕೇಡಾಗುತ್ತದೆ ಎಂದು ಎಚ್ಚರಿಸುತ್ತಾನೆ. ಆದರೆ, ತಂದೆತಾಯಿಯರನ್ನು ಅಕ್ಕತಂಗಿಯರನ್ನು ಬಂಧುಬಾಂಧವರನ್ನೆಲ್ಲ ಕಾಣಬೇಕು ಎಂಬ ಮಾಯಾಪಾಶಕ್ಕೆ ಸಿಲುಕಿದ ದಾಕ್ಷಾಯಿಣಿಯು ಈಶ್ವರನ ಮಾತನ್ನು ತಿರಸ್ಕರಿಸಿ, ತಾನೊಬ್ಬಳೇ ತಂದೆಯ ಯಾಗಕ್ಕೆ ಹೋಗುತ್ತಾಳೆ.
ಆದರೆ, ಯಾಗಶಾಲೆಗೆ ಹೋದ ದಾಕ್ಷಾಯಿಣಿಯನ್ನು ಯಾರೂ ಮಾತನಾಡಿಸುವುದೇ ಇಲ್ಲ. ತಾಯಿ ಅಕ್ಕ ತಂಗಿಯರೆಲ್ಲ ಮಾತನಾಡಿಸಲು ಮುಂದಾದರೂ ಕೂಡಾ ದಕ್ಷನು ಅವರನ್ನೆಲ್ಲ ಗದರಿಸಿ ಯಾರೂ ಆಕೆಯನ್ನು ಮಾತನಾಡಿಸದಂತೆ ಮಾಡುತ್ತಾನೆ. ಆಗ ಗಂಡನ ಮಾತನ್ನು ಮೀರಿ ಬಂದ ದಾಕ್ಷಾಯಿಣಿಗೆ ತನ್ನ ತಪ್ಪಿನ ಅರಿವಾಗುತ್ತದೆ. ಆದರೂ ಸಹಿಸಿಕೊಂಡು ಯಾಗದ ಸಂಭ್ರಮವನ್ನು ನೋಡುತ್ತಾ ಇರುತ್ತಾಳೆ. ಅಲ್ಲಿ ಯಾಗ ನಡೆಸುತ್ತಿರುವ ಮುನಿಗಳು ಇಂದ್ರ , ಅಗ್ನಿ , ಯಮ , ನಿಋತಿ , ವರುಣ , ವಾಯು , ಕುಬೇರ ಎಲ್ಲರಿಗೂ ಹವಿಸ್ಸನ್ನು ಅರ್ಪಿಸಿ ಕೊನೆಯಲ್ಲಿ “ಈಶಾಯ ಸ್ವಾಹಾ” ಎಂದು ಈಶನಿಗೆ ಹವಿಸ್ಸನ್ನು ಅರ್ಪಿಸಲು ತೊಡಗಿದಾಗ, ದಕ್ಷನು ಸಿಟ್ಟಿನಿಂದ ಅವರನ್ನು ತಡೆದು ಈಶ್ವರನಿಗೆ ಹವಿಸ್ಸನ್ನು ಕೊಡಬಾರದು ಇದು ನಿರೀಶ್ವರ ಯಾಗ ಎಂದು ಕೂಗುತ್ತಾನೆ. ಆಗ ದಾಕ್ಷಾಯಿಣಿಗೆ ಕೋಪ ಬರುತ್ತದೆ. ಆಕೆ ದಕ್ಷನನ್ನು ಜರೆಯುತ್ತಾಳೆ. ದಕ್ಷನೂ ಆಕೆಯನ್ನು ಮತ್ತು ಈಶ್ವರನನ್ನು ನಿಂದಿಸುತ್ತಾನೆ.
ಅವಮಾನ ತಾಳಲಾರದೇ ಹತಾಶಳಾದ ದಾಕ್ಷಾಯಿಯಿಣಿಯು, ತಾನೇ ಯೋಗಾಗ್ನಿಯನ್ನು ಸೃಷ್ಟಿಸಿಕೊಂಡು ಅದರಲ್ಲಿ ತನ್ನನ್ನು ತಾನೇ ಆಹುತಿ ಕೊಟ್ಟುಕೊಳ್ಳುತ್ತಾಳೆ. ದಾಕ್ಷಾಯಿಣಿಯು ಸುಟ್ಟುಹೋದಳೆಂಬ ವಾರ್ತೆ ತಿಳಿದ ಈಶ್ವರನು ಕುಪಿತನಾಗಿ ತನ್ನ ಜಡೆಯನ್ನು ನೆಲಕ್ಕೆ ಬಡಿದು ವೀರಭದ್ರನನ್ನು ಸೃಷ್ಟಿಸುತ್ತಾನೆ. ಅವನಿಗೆ ದಕ್ಷನನ್ನು ಕೊಲ್ಲುವಂತೆ ಅಪ್ಪಣೆ ಕೊಡುತ್ತಾನೆ. ವೀರಭದ್ರನು ದಕ್ಷನಲ್ಲಿಗೆ ಬಂದು ಯಾಗಶಾಲೆಯನ್ನೆಲ್ಲ ಧ್ವಂಸಗೊಳಿಸುತ್ತಾನೆ. ದಕ್ಷನನ್ನೂ ಅವನೊಂದಿಗೆ ಸಹಕರಿಸಿದವರೆಲ್ಲರನ್ನೂ ಕೊಲ್ಲುತ್ತಾನೆ. ಹೆಂಡತಿಯನ್ನು ಕಳೆದುಕೊಂಡ ಈಶ್ವರನು ಕೈಲಾಸದಲ್ಲಿ ಒಂಟಿಯಾಗಿಯೇ ಉಳಿಯುತ್ತಾನೆ. ಧ್ಯಾನಾಸಕ್ತನಾಗಿ ಉಗ್ರವಾದ ತಪಸ್ಸಿನಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತಾನೆ.
ಇತ್ತ ತಾರಕಾಸುರನೆಂಬ ದೈತ್ಯನು ತಪಸ್ಸಿನಲ್ಲಿ ಬ್ರಹ್ಮನನ್ನು ಮೆಚ್ಚಿಸಿ , ಈಶ್ವರನಿಂದ ಜನಿಸಿದ ಪುತ್ರನಿಂದಲ್ಲದೇ ಅನ್ಯರಿಂದ ಮರಣ ಇಲ್ಲದಂತಹ ವರ ಪಡೆದು , ವರಬಲದಿಂದ ಕೊಬ್ಬಿ ದೇವತೆಗಳನ್ನೆಲ್ಲ ಸೋಲಿಸಿ ಲೋಕಕಂಟಕನಾಗಿ ಮೆರೆಯುತ್ತಿರುತ್ತಾನೆ. ಅವನೊಡನೆ ಹೋರಾಡಿ ಸೋತ ದೇವತೆಗಳು ಚಿಂತಿತರಾಗುತ್ತಾರೆ. ಏಕೆಂದರೆ , ಈಶ್ವರನಿಗೆ ಹೆಂಡತಿ ಇಲ್ಲದಿರುವುದರಿಂದ ಆತನಿಗೆ ಮಗನು ಜನಿಸುವುದು ಸಾಧ್ಯವಿಲ್ಲ. ಹೀಗಾಗಿ ದೇವತೆಗಳೆಲ್ಲರೂ ಈಶ್ವರನಿಗೆ ಮದುವೆ ಮಾಡುವ ಉಪಾಯ ಮಾಡುತ್ತಾರೆ. ದಕ್ಷಯಜ್ಞದ ಸಂದರ್ಭದಲ್ಲಿ ಉರಿದು ಹೋದ ದಾಕ್ಷಾಯಿಣಿಯು ನಂತರ ಪರ್ವತ ರಾಜನಿಗೆ ಮಗಳಾಗಿ ಜನಿಸಿ , ಪಾರ್ವತಿ (ಗಿರಿಜೆ) ಎಂಬ ಹೆಸರಿನಿಂದ ಈಶ್ವರನನ್ನೇ ಧ್ಯಾನಿಸುತ್ತಾ ತಾನೂ ಕೂಡಾ ತಪಸ್ಸನ್ನು ಆಚರಿಸುತ್ತಾ ಅರಣ್ಯದಲ್ಲಿ ಇದ್ದಾಳೆ. ಅವಳನ್ನೇ ಕೊಟ್ಟು ಈಶ್ವರನಿಗೆ ಮದುವೆ ಮಾಡಿಸುವುದು ಎಂದು ತೀರ್ಮಾನಿಸುತ್ತಾರೆ.
ಆದರೆ, ಮೊದಲು ಈಶ್ವರನನ್ನು ತಪಸ್ಸಿನಿಂದ ಎಬ್ಬಿಸಬೇಕಲ್ಲ , ಅದಕ್ಕಾಗಿ ಮನ್ಮಥನ ಮೊರೆಹೋಗುತ್ತಾರೆ. ಮನ್ಮಥನು ಈಶ್ವರನಿಗೆ ತನ್ನಲ್ಲಿರುವ ಐದು ಕುಸುಮ ಬಾಣಗಳನ್ನು ಬಿಡುತ್ತಾನೆ. ಮನ್ಮಥನಿಗೆ ‘ಕಾಮ’ ಎಂಬುದು ಇನ್ನೊಂದು ಹೆಸರು. ಕಾಮನ ಬಾಣ ತಾಗಿದ್ದರಿಂದ ಈಶ್ವರನು ವಿಚಲಿತನಾಗುತ್ತಾನೆ. ಇದರಿಂದ ಆತನ ತಪಸ್ಸು ಭಗ್ನವಾಗುತ್ತದೆ. ಆಗ ಸಿಟ್ಟಾದ ಶಿವನು ತನ್ನ ಮೂರನೇ ಕಣ್ಣನ್ನು ತೆರೆದು ಮನ್ಮಥನನ್ನು ಸುಟ್ಟುಬಿಡುತ್ತಾನೆ. ಇದೇ “ಕಾಮದಹನ”. ಇಲ್ಲಿ ಮನ್ಮಥನು ಸುಟ್ಟುಹೋದರೂ ಶಿವನನ್ನು ತಪಸ್ಸಿನಿಂದ ಎಬ್ಬಿಸಿರುವುದೇ ದೊಡ್ಡ ಸಾಧನೆ. ಹೀಗಾಗಿ ಈ ಘಟನೆಯನ್ನು ದೇವತೆಗಳು ಸಂಭ್ರಮಿಸುತ್ತಾರೆ. ಈ ಆಚರಣೆಯೇ “ಕಾಮ ದಹನ”. ಈ ಘಟನೆ ನಡೆದದ್ದು ಫಾಲ್ಗುಣ ಶುದ್ಧ ಪೂರ್ಣಿಮೆಯಂದು. ಆದ್ದರಿಂದ ಈ ದಿನವನ್ನು “ಕಾಮನ ಹುಣ್ಣಿಮೆ”ಯಾಗಿ ಆಚರಿಸುತ್ತಾರೆ.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564
ಬಳಿಕ ಮನ್ಮಥನ ಹೆಂಡತಿ ರತಿ ಮತ್ತು ದೇವತೆಗಳೆಲ್ಲರೂ ಸೇರಿ ಶಿವನನ್ನು ಧ್ಯಾನಿಸಿ ಆತನನ್ನು ಪ್ರಸನ್ನಗೊಳಿಸುತ್ತಾರೆ. ಆಗ ಸಂತುಷ್ಟನಾದ ಪರಶಿವನು “ಮನ್ಮಥನು ಭಸ್ಮವಾದರೂ ಆತನಿಗೆ ಸಾವಿಲ್ಲ , ಆತನು ಹೆಂಡತಿಯೊಡನೆ ದೇಹ (ಅಂಗ) ಸಹಿತವಾಗಿಯೂ , ಉಳಿದ ಸಂದರ್ಭದಲ್ಲಿ ದೇಹ (ಅಂಗ) ರಹಿತನಾದ ‘ಅನಂಗ’ನಾಗಿಯೂ ಜೀವಿತನಾಗಿರುತ್ತಾನೆ , ಭವಿಷ್ಯದಲ್ಲಿ ಈ ಮನ್ಮಥನೇ ಪ್ರದ್ಯುಮ್ನನೆಂಬ ಹೆಸರಿನಿಂದ ಕೃಷ್ಣನ ಮಗನಾಗಿ ಹುಟ್ಟಿ ಪುನಹ ರತಿಯನ್ನು ವಿವಾಹವಾಗುತ್ತಾನೆ” ಎಂದು ಹೇಳಿ ರತಿಯನ್ನು ಸಂತೈಸುತ್ತಾನೆ. ನಂತರ ಶಿವ ಪಾರ್ವತಿಯರ ಕಲ್ಯಾಣವನ್ನು ವಿಜೃಂಭಣೆಯಿಂದ ನೆರವೇರುತ್ತದೆ. ಮುಂದೆ ಅವರಿಬ್ಬರಿಗೆ ಜನಿಸಿದ ಷಣ್ಮುಖನೇ ತಾರಕಾಸುರನನ್ನು ಕೊಲ್ಲುತ್ತಾನೆ. ಇದು ಗಿರಿಜಾ ಕಲ್ಯಾಣದ ಕಥೆ.
ಈ ವರ್ಷ ಚತುರ್ದಶಿಯ ದಿನವೇ ರಾತ್ರಿ ಇಡೀ ಹುಣ್ಣಿಮೆಯ ತಿಥಿಯು ಸಿಗುವುದರಿಂದ ಮತ್ತು ಹುಣ್ಣಿಮೆಯ ದಿನ ರಾತ್ರಿಯಾಗುವುದರೊಳಗೆ ಹುಣ್ಣಿಮೆಯ ತಿಥಿಯು ಕೊನೆಗೊಳ್ಳುವುದರಿಂದ ಚತುರ್ದಶಿಯ ದಿನವೇ ಅಂದರೆ 24-03-2024 ನೇ ಭಾನುವಾರದಂದೇ ಕಾಮದಹನವನ್ನು ಆಚರಿಸಬೇಕಾಗುತ್ತದೆ. ಪ್ರದೇಶದಿಂದ ಪ್ರದೇಶಕ್ಕೆ ಮತ್ತು ಜನಾಂಗದಿಂದ ಜನಾಂಗಕ್ಕೆ ಹೋಳಿ ಹಬ್ಬದ ಆಚರಣೆಯಲ್ಲಿ ವ್ಯತ್ಯಾಸಗಳಿವೆ. ಆದರೆ, ಪರಸ್ಪರ ಬಣ್ಣವನ್ನು ಎರಚಿಕೊಂಡು ಸಂತೋಷಪಡುವುದು ಎಲ್ಲೆಡೆ ಸಾಮಾನ್ಯವಾಗಿದೆ.